ಕೊರಟಗೆರೆ:-
ಕೆಲಸ ಮುಗಿಸಿಕೊಂಡು ಮನೆಗೆ ತೆರಳುವ ವೇಳೆ ಬೈಪಾಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಜರುಗಿದೆ.
ತಾಲೂಕಿನ ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾಪಂ ವ್ಯಾಪ್ತಿಯ ಕಾದಿಲಾಪುರ ಗ್ರಾಮದ ವಾಸಿಯಾದ ತಿಮ್ಮಪ್ಪನ ಮಗನಾದ ಸತೀಶ್(28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ಪಟ್ಟಣದ ಮಹಾಲಿಂಗಪ್ಪನ ತೋಟದಲ್ಲಿ ಸೂಪರ್‍ವೈಸರ್ ಆಗಿ ಕಳೆದ ಐದು ವರ್ಷದಿಂದ ಕೆಲಸ ಮಾಡುತ್ತಿದ್ದ ಮೃತ ಸತೀಶ್ ಕೆಲಸ ಮುಗಿದ ನಂತರ ತನ್ನ ಮನೆಗೆ ತೆರಳುವ ವೇಳೆಯಲ್ಲಿ ಬೈಪಾಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಸಿಪಿಐ ಮುನಿರಾಜು, ಪಿಎಸೈ ಮಂಜುನಾಥ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
