ಎಂ ಎನ್ ಕೋಟೆ
ಗುಬ್ಬಿ ತಾಲ್ಲೂಕಿನ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ವಿ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಬಗ್ಗೆ ಸೂಕ್ತ ಕ್ರಮವಹಿಸಬೇಕು. ಸಿಬ್ಬಂದಿಗಳು ಟ್ಯಾಂಕರ್‍ಗಳನ್ನು ಪ್ರತಿ ತಿಂಗಳು ಸ್ವಚ್ಛಗೊಳಿಸಬೇಕು ಎಂದು ಅಧ್ಯಕ್ಷರು ಸಿಬ್ಬಂದಿಗಳಿಗೆ ತಿಳಿಸಿದರು.
ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳನ್ನು ನೇಮಕ ಮಾಡಬೇಕು. ಸುಮಾರು ವರ್ಷಗಳಿಂದ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಮತ್ತು ನೀರು ವಿತರಕರು ಹಾಗೂ ಕಚೇರಿ ಸಹಾಯಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇದುವರೆಗೂ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಮಾಡಿಲ್ಲ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಕ್ರಮಕೈಗೊಳ್ಳಬೇಕು ಎಂದು ಸದಸ್ಯ ಲೋಕೇಶ್ ಸಭೆಯಲ್ಲಿ ಆರೋಪಿಸಿದರು ಪಂಚಾಯಿತಿ ಸಿಬ್ಬಂದಿಗಳಿಗೆ 7 ತಿಂಗಳಿನಿಂದ ವೇತನ ನೀಡಿಲ್ಲ ಎಂದು ಆರೋಪಿಸಿದರು. ಕಾರ್ಯನಿರ್ವಾಹಕ ಅಧಿಕಾರಿಗಳು ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಧಾಮಣಿ, ಪಿಡಿಓ ಸಿ. ನಾಗೇಂದ್ರ, ಗ್ರಾಮ ಪಂಚಾಯಿತಿ ಸದಸ್ಯರಾದ ಲೋಕೇಶ್, ಸತೀಶ್, ದೇವರಾಜು, ಗಂಗಾಧರಯ್ಯ, ಸರ್ವಮಂಗಳ, ಕೆಂಪಮ್ಮ, ನೇತ್ರಾವತಿ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
