ಹುಳಿಯಾರು
ಪಟ್ಟಣದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಪಟ್ಟಣ ಪಂಚಾಯ್ತಿಯಿಂದ ಮಾಸ್ಕ್ ಧರಿಸದೇ ವಾಹನದಲ್ಲಿ ಸಂಚರಿಸುವವರನ್ನು ತಡೆದು ದಂಡ ವಿಧಿಸಿದರು. ಪಪಂ ಸಿಬ್ಬಂದಿ ಪಟ್ಟಣದ ಬಸ್ ನಿಲ್ದಾಣ, ಪೊಲೀಸ್ ಸ್ಟೇಷನ್ ಸರ್ಕಲ್, ಪೇಟೆ ಬೀದಿ ರಸ್ತೆ ಸೇರಿದಂತೆ ವಿವಿಧ ಮುಖ್ಯರಸ್ತೆಗಳಲ್ಲಿ ಮಾಸ್ಕ್ ಹಾಕದೇ ಸಂಚರಿಸುವ ದ್ವಿಚಕ್ರವಾಹನ ಸವಾರರನ್ನು ತಡೆದು 100 ರೂ. ದಂಡ ವಿಧಿಸುವ ಜೊತೆಗೆ ಕೊರೊನಾ ಬಗ್ಗೆ ಜನರಲ್ಲಿ ಮತ್ತಷ್ಟು ಅರಿವು ಮೂಡಿಸು ಕಾರ್ಯ ಮಾಡುತ್ತಿದ್ದಾರೆ.
ಪಪಂ ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜನರಿಗೆ ಕೊರೊನಾ ಬಗ್ಗೆ ಸಾಕಷ್ಟು ಅರಿವು ಮೂಡಿಸುತ್ತಿದ್ದರೂ ಜನರು ಅನವಶ್ಯಕವಾಗಿ ಮಾಸ್ಕ್ ಧರಿಸದೇ ಓಡಾಡುತ್ತಾರೆ. ಸಾರ್ವಜನಿಕರ ಸುರಕ್ಷತೆಗೆ. ಸೋಂಕು ಬರದಂತೆ ಕಾಪಾಡಲು ಹಗಲಿರುಳು ಶ್ರಮಿಸಲಾಗುತ್ತಿದೆ. ಪೊಲೀಸ್, ಆರೋಗ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಿರಂತರವಾಗಿ ಅರಿವು ಮೂಡಿಸುತ್ತಿದ್ದಾರೆ. ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
