ದೇವೇಗೌಡರ ಗೆಲುವಿಗಾಗಿ ಪ್ರಮಾಣಿಕವಾಗಿ ದುಡಿಯಿರಿ:ಹೊನ್ನಗಿರಿಗೌಡ

ಗುಬ್ಬಿ

        ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ರೈತಪರ ಚಿಂತಕರು ಅಭಿವೃದ್ಧಿಯ ಹರಿಕಾರರು ಹಾಗೂ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೆಗೌಡರು ಸ್ಪರ್ಧಿಸಿರುವುದು ಅಭಿನಂದನಾರ್ಹವಾದುದಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಅತ್ಯಧಿಕ ಮತಗಳಿಂದ ಅವರನ್ನು ಗೆಲ್ಲಿಸಿ ಮತ್ತೊಮ್ಮೆ ದೆಹಲಿಯ ಗದ್ದುಗೆಗೆ ಕಳುಹಿಸಿಕೊಡಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿರುವುದಾಗಿ ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ತಿಳಿಸಿದರು.

      ಪಟ್ಟಣದ ಅವರ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಮತ್ತೊಮ್ಮೆ ದೆಹಲಿ ಗದ್ದುಗೆಗೆ ಕಳುಹಿಸಲು ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡುವುದಾಗಿ ತಿಳಿಸಿದರು.

        ರಾಜ್ಯದಲ್ಲಿ ಮೈತ್ರಿ ಸರಕಾರ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಿದೆ. ಇಂತಹ ಸಂದರ್ಭದಲ್ಲಿ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸ್ಪರ್ಧಿಸಿರುವುದು ಸಂತಸ ತಂದಿದೆ. ಗೌಡರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದರೆ ಇಡೀ ಜಿಲ್ಲೆ ಸಮಗ್ರವಾಗಿ ಅಭಿವೃದ್ಧಿಯಾಗುವುದರ ಜೊತೆಗೆ ಹಲವು ಸಮಸ್ಯೆಗಳು ಬಗೆಹರಿಯಲಿವೆ ಎಂದು ತಿಳಿಸಿದ ಅವರು, ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ಗೌಡರನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.

        ರಾಜ್ಯದಲ್ಲಿ ಎರಡೂ ಪಕ್ಷಗಳು ಒಂದಾಗಿ ಸಮ್ಮಿಶ್ರ ಸರ್ಕಾರದ ಮೂಲಕ ಇಡೀ ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದರ ಜೊತೆಗೆ ಜನಸಾಮಾನ್ಯರಿಗೂ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡಿದ್ದು, ಇದೀಗ ಎರಡೂ ಪಕ್ಷಗಳು ಮೈತ್ರಿ ಸರ್ಕಾರದ ನಿರ್ಧಾರದಂತೆ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಹುಟ್ಟು ಹೋರಾಟಗಾರರಾಗಿ,

        ರೈತರ ಪರವಾಗಿ ಕೆಲಸ ಮಾಡುವಂತಹ ಹೆಚ್.ಡಿ.ದೇವೆಗೌಡರು ನಮ್ಮ ಜಿಲ್ಲೆಗೆ ಬಂದಿರುವುದನ್ನು ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಎಲ್ಲಾ ಮುಖಂಡರು, ಕಾರ್ಯಕರ್ತರು ಸ್ವಾಗತಿಸಿದ್ದು ಮತ್ತೊಮ್ಮೆ ಅವರು ದೆಹಲಿಗೆ ತೆರಳಿ ರಾಜ್ಯದ ಹಾಗೂ ಜಿಲ್ಲೆಯ ಪರವಾಗಿ ಕೆಲಸ ಮಾಡುವುದು ನಮ್ಮೆಲ್ಲರ ಆಸೆಯಾಗಿದೆ. ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಅಂತಹ ಹಿರಿಯ ರಾಜಕಾರಣಿ ಅವಶ್ಯಕತೆ ಇದ್ದು, ಅವರಿಗೆ ನಮ್ಮೆಲ್ಲರ ಸಹಕಾರ ಸಹಮತವಿದ್ದು ಈ ಭಾರಿ ಹೆಚ್ಚು ಅಂತರದಲ್ಲಿ ಅವರನ್ನು ಗೆಲ್ಲಿಸಲಾಗುತ್ತದೆ. ಗುಬ್ಬಿ ತಾಲ್ಲೂಕಿನ ಮನೆಮನೆಗೆ ತೆರಳಿ ಅವರ ಪರವಾಗಿ ಪ್ರಚಾರ ಮಾಡಲು ನಮ್ಮ ಎಲ್ಲ ಕಾರ್ಯಕರ್ತರು ಆಗಮಿಸಲಿದ್ದಾರೆ.

        ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಉತ್ತಮ ಆಡಳಿತ ನೀಡುತ್ತಿದ್ದು ನಮ್ಮೆಲ್ಲ ರಾಜ್ಯ ಮುಖಂಡರುಗಳು ಸಹ ಅವರನ್ನು ಗೆಲ್ಲಿಸುವುದಕ್ಕೆ ಮುಂದಾಗಿದ್ದು, ಜಿಲ್ಲೆಯ ಮತದಾರರು ಸಹ ಅವರನ್ನು ಗೆಲ್ಲಿಸಲು ಪೂರ್ಣ ಪ್ರಮಾಣದ ಸಹಕಾರ ತೋರುತ್ತಿದ್ದಾರೆ. ಈಗಾಗಲೆ ಜಿಲ್ಲೆಯಾದ್ಯಂತ ಗೌಡರಪರ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ವ್ಯಾಪಕ ಪ್ರಚಾರ ಕೈಗೊಂಡಿದ್ದು ಮತದಾರರು ಉತ್ತಮ ಪ್ರತಿಕ್ರಿಯೆ ತೋರುತ್ತಿದ್ದಾರೆ ಎಂದು ತಿಳಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link