ಗೃಹಬಳಕೆ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ!!

ನವದೆಹಲಿ :  

      ಕೊರೊನಾ ಲಾಕ್‌ಡೌನ್‌ನಿಂದ ತತ್ತರಿಸಿರುವ ಜನರಿಗೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿರುವುದು ಇದೀಗ ಗಾಯದ ಮೇಲೆ ಬರೆ ಎಳೆದಂತಾಗಿದೆ.

     ಜುಲೈ 1ರಿಂದಲೇ ಅನ್ವಯ ಆಗುವಂತೆ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 25.50 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಕಳೆದ ಆರು ತಿಂಗಳಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ ರೂ. 140 ರಷ್ಟು ಏರಿಕೆಯಾಗಿದೆ.

     ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap