ಬೆಂಗಳೂರು:

ಬೈಕ್‌ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದ್ದು ಬೈಕ್‌ನಲ್ಲಿದ್ದ ಯುವತಿ ಮೃತಪಟ್ಟ ಘಟನೆ ಬೆಂಗಳೂರಿನ ಎಂ.ಜಿ. ರಸ್ತೆಯ ಗರುಡಾ ಮಾಲ್ ಬಳಿ ನಡೆದಿದೆ.
ಬೈಕ್‌ನಲ್ಲಿದ್ದ ಸಂಜನಾ ಪ್ರಿಯಾ(24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಂಜನಾ ಅಣ್ಣನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇಂದು ಬೆಳ್ಳಂಬೆಳಗ್ಗೆ ರಸ್ತೆ ಅಪಘಾತವೊಂದು ಸಂಭವಿಸಿದೆ. ಬೆಂಗಳೂರಿನ ಎಂ.ಜಿ. ರಸ್ತೆಯ ಗರುಡಾ ಮಾಲ್ ಬಳಿ ಬೈಕ್ನಲ್ಲಿ ತೆರಳುತ್ತಿದ್ದ ಅಣ್ಣ-ತಂಗಿಗೆ ಯಮನಂತೆ ಬಂದ ಲಾರಿವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸಂಜನಾ ಪ್ರಿಯ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತಳ ಅಣ್ಣನ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಶೋಕ್ ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
