
ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿಯಲ್ಲಿ ಮಾರ್ಚ್ 28ರವರೆಗೆ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದುಮಳೆ ಯಾಗುವ ಸಾಧ್ಯತೆಯಿದೆ.
ಮಾ.28 ರಿಂದ `SSLC’ ಪರೀಕ್ಷೆ : ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಸಿಗಲ್ಲ : ಸಚಿವ ಬಿ.ಸಿ.ನಾಗೇಶ್
ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಅಬ್ಬರಿಸಲಿದೆ. ಇಂದಿನಿಂದ ಮಾರ್ಚ್ 28ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆಯಲ್ಲಿ ಜಾಸ್ತಿ ತಾಪಮಾನ ಉಂಟಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಶುಕ್ರವಾರ ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದೆ. ಕೆಲವೆಡೆ ಸುರಿದ ಬಿರುಗಾಳಿ ಸಹಿತ ಮಳೆಗೆ ಸಾರ್ವಜನಿಕ ಆಸ್ತಿಪಾಸ್ತಿಗೆ ಧಕ್ಕೆಯಾಗಿದೆ. ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಹೊಸನಗರ ಮುಂತಾದ ಕಡೆಗಳಲ್ಲಿ ಅಕಾಲಿಕ ಮಳೆಯಾಗಿದೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಹೆಬೋಡಿ ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆ ಕುಸಿದು ಬಿದ್ದಿದೆ. ಹೊಸನಗರ, ತೀರ್ಥಹಳ್ಳಿ ತಾಲೂಕಿನ ಹಲವೆಡೆ ಬಿರುಗಾಳಿಗೆ ಮರಗಳು ಉರುಳಿ ಬಿದ್ದಿವೆ. ಮೇಗರವಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಗಾತ್ರದ ಮರಗಳು ಉರುಳಿವೆ. ವಿದ್ಯುತ್ ಕಂಬಗಳು ಕೂಡ ಉರುಳಿಬಿದ್ದಿವೆ.
ಇಂದಿನಿಂದ 15 ನೇ ಆವೃತ್ತಿ `ಐಪಿಎಲ್’ ಹಬ್ಬ ಆರಂಭ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
ಮಹಾರಾಷ್ಟ್ರದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕಕ್ಕೂ ಮಳೆಯ ಪರಿಣಾಮ ತಟ್ಟಲಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.
ಮಾರ್ಚ್ 28ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಈ ಭಾಗದಲ್ಲಿ ಇಂದು ಗುಡುಗು, ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ಮಾರ್ಚ್ 27, 28ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್ 28ರವರೆಗೆ ಮಳೆಯಾಗಲಿದೆ.
IMD ಪ್ರಕಾರ ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಮಾರ್ಚ್ 28ರವರೆಗೆ ಚದುರಿದ ಮಳೆಯಾಗಲಿದೆ. ಮುಂದಿನ ಸೋಮವಾರದ ನಂತರವೂ ಈ ರಾಜ್ಯಗಳಲ್ಲಿ ಆರ್ದ್ರ ಪರಿಸ್ಥಿತಿಗಳು ಮುಂದುವರಿಯಬಹುದು. ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಲಿದೆ. ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ತುಂತುರು ಮಳೆ ನಿರೀಕ್ಷಿಸಲಾಗಿದೆ.
RRR ಕಲೆಕ್ಷನ್ಗೆ ದೊಡ್ಡ ಹೊಡೆತ; ‘ಬಾಹುಬಲಿ 2’ ದಾಖಲೆ ಮುರಿಯೋದು ಕಷ್ಟ?
ಇನ್ನು 4 ದಿನಗಳ ಕಾಲ ಭಾರತದ ಈಶಾನ್ಯ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಚದುರಿದ ಅಥವಾ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇಂದು ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ. ಮುಂದಿನ 4 ದಿನಗಳವರೆಗೆ ಭಾರತದ ನೈಋತ್ಯ ಕರಾವಳಿಯಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯನ್ನು ತರುತ್ತದೆ. ಅರುಣಾಚಲ ಪ್ರದೇಶದಲ್ಲಿ ಇಂದು ಸಾಕಷ್ಟು ವ್ಯಾಪಕವಾದ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕರ್ನಾಟಕ ಮತ್ತು ಕೇರಳದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಒಡಿಶಾ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಒಡಿಶಾದಲ್ಲಿ ಬಿಸಿ ಗಾಳಿಯ ಪರಿಸ್ಥಿತಿಗಳು ಉಂಟಾಗಲಿವೆ.
ಶಾಲೆಯ ಪರೀಕ್ಷೆಯಲ್ಲಿ ಪುನೀತ್ ಬಗ್ಗೆ ಪ್ರಶ್ನೆ; ಸಖತ್ ವೈರಲ್ ಆಗಿದೆ ಪ್ರಶ್ನೆಪತ್ರಿಕೆಯ ಫೋಟೋ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








