ಬೆಂಗಳೂರು:
ಪುತರನ ಲಂಚಾವತಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ
.
ಅವರ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಸಿಬ್ಬಂದಿ ರಾತ್ರಿಯಿಂದ ಇಂದು ಬೆಳಗಿನವರೆಗೆ ನಡೆಸಿದ ಸತತ ಕಾರ್ಯಾಚರಣೆ ಮತ್ತು ಶೋಧ ವೇಳೆ 6 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.
ಲೋಕಾಯುಕ್ತ ದಾಳಿ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಅದಕ್ಕೆ ಇಂದು ಪ್ರತಿಕ್ರಿಯೆ ನೀಡಿದ್ದ ಸಿಎಂ ಬೊಮ್ಮಾಯಿ, ಲೋಕಾಯುಕ್ತ ಸಂಸ್ಥೆಯನ್ನು ಬಿಜೆಪಿ ಸರ್ಕಾರವೇ ಮರುಸ್ಥಾಪಿಸಿದ್ದು ಭ್ರಷ್ಟಾಚಾರ ನಿಗ್ರಹಕ್ಕೆ. ಸಮಗ್ರ ತನಿಖೆಯಾಗಿ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆಯಾಗುತ್ತದೆ ಎಂದಿದ್ದರು.
ಇದಾದ ಬಳಿಕ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಪಕ್ಷಕ್ಕೆ ಮುಜುಗರವಾಗಬಾರದು ಮತ್ತು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಬಾರದು ಎಂಬ ಉದ್ದೇಶದಿಂದ ಸಿಎಂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಅಧ್ಯಕ್ಷ ಸ್ಥಾನಕ್ಕೆ ಇಂದು ಸಾಯಂಕಾಲದೊಳಗೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸೂಚಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ