ಮಧುಗಿರಿ :
2ನೇ ಹಂತದ ಚುನಾವಣಾ ಮಾರ್ಗ ಸೂಚಿಗಳನ್ನು ಎಲ್ಲರೂ ತಪ್ಪದೇ ಪಾಲಿಸುವುದರ ಜೊತೆಗೆ ಅಭ್ಯರ್ಥಿಗಳು ಯಾವುದೇ ರೀತಿಯ ಗಲಭೆ ಮತ್ತು ಪ್ರಚೋದನೆಗೆ ಅವಕಾಶ ನೀಡಬಾರದೆಂದು ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಡಾ. ವಂಶಿಕೃಷ್ಣ ಕರೆ ನೀಡಿದರು.
ತಾಲ್ಲೂಕಿನ ಕೊಡಿಗೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಚುನಾವಣಾ ಅಭ್ಯರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶಾಂತಿಯುತವಾಗಿ ಮತದಾನ ನಡೆಯಲು ಪ್ರತಿಯೊಬ್ಬರೂ ಸಹಕಾರ ನೀಡಬೇಕಾಗಿದೆ. ಈ ಭಾಗ ಆಂಧ್ರ ಪ್ರದೇಶದ ಗಡಿಯಲ್ಲಿರುವುದರಿಂದ ಮತ್ತು ಸೂಕ್ಷ್ಮ ಪ್ರದೇಶವಾಗಿರುವ ಕಾರಣ ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪೊಲೀಸ್ ಇಲಾಖೆಯಿಂದ ವಿಶೇಷವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ರಾತ್ರಿ ಸಮಯದಲ್ಲಿ ಗಸ್ತು ತಿರುಗಲು ವಿಶೇಷ ತಂಡ ರಚೆನೆ ಮಾಡಲಾಗಿದೆ. ಅಭ್ಯರ್ಥಿಗಳು ಮತ ಕೇಳುವ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಪಾಲಿಸಿ ಕೊಳ್ಳುವುದರ ಜೊತೆಗೆ ಜನರ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆಸದೆ ಪ್ರೀತಿಯಿಂದ ಮತ ಕೇಳಿಕೊಳ್ಳಿ ಎಂದರಲ್ಲದೆ, ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಡವಾಡಿ ಮತ್ತು ಕಡಗತ್ತೂರು ಗ್ರಾಮಗಳಿಗೂ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಪಿ.ಎಸ್.ಐ. ಫಾಲಾಕ್ಷ ಪ್ರಭು ಹಾಗೂ ಪೊಲೀಸ್ ಸಿಬ್ಬಂದಿ ಗ್ರಾಮ ಪಂಚಾಯಿತಿ ಚುನಾವಣಾ ಅಭ್ಯರ್ಥಿಗಳು ಮತ್ತು ಹಲವು ಪಕ್ಷಗಳ ಮುಖಂಡರು ಮತ್ತು ಗ್ರಾಮಸ್ಥರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
