ಮಧುಗಿರಿ :
ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 10 ಲೀಟರ್ ಮದ್ಯ ವಶಪಡಿಸಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ತಾಲ್ಲೂಕಿನ ಚಂದ್ರಬಾವಿ ಗ್ರಾಮದ ಸಿದ್ದೇಶ್ವರ ಜನರಲ್ ಸ್ಟೋರ್‍ನ ಮಾಲೀಕ ಅನಿಲ್ ಕುಮಾರ್ ಅಂಗಡಿಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ 10 ಲೀಟರ್ ಮದ್ಯ ದಾಸ್ತಾನು ಮಾಡಿದ್ದರು. ಅಬಕಾರಿ ನಿರೀಕ್ಷಕಿ ಶ್ರೀಲತಾ ಹಾಗೂ ಸಿಬ್ಬಂದಿ ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
