ಮಧುಗಿರಿ :
ಮೇವಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಮೇವು ಭಸ್ಮವಾಗಿರುವ ಘಟನೆ ತಾಲೂಕಿನ ಪುರವರ ಹೋಬಳಿಯ ಚಿಕ್ಕ ಹೊಸಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ತಿಮ್ಮಯ್ಯ ಅವರ ಪುತ್ರ ದೇವರಾಜ್ ಅವರಿಗೆ ಸೇರಿದ ಜಮೀನಿನಲ್ಲಿ ಮೇವಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಮೇವು ಭಸ್ಮವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕಂದಾಯ ಇಲಾಖೆ ಅಧಿಕಾರಿ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
