ಮಧುಗಿರಿ :
ಅಪ್ರಾಪ್ತ ದಲಿತ ಬಾಲಕಿಯರನ್ನು ಆತ್ಯಾಚಾರ ಮಾಡಿ ಮೃತ ದೇಹಗಳನ್ನು ಬಾವಿಗೆ ಎಸೆದು ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಅವರುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲ್ಲೂಕು ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳರವರಿಗೆ ಮನವಿ ಪತ್ರ ಸಲ್ಲಿಸಿದರು.
ತಾಲ್ಲೂಕು ಅಧ್ಯಕ್ಷ ಸಿದ್ದಾಪುರ ರಂಗಶ್ಯಾಮಣ್ಣ ಮಾತನಾಡಿ, ಮೇ 14 ರಂದು ರಾಜ್ಯದ ಬಿಜಾಪುರ ಜಿಲ್ಲೆಯ ಬಾಗೇವಾಡಿ ತಾಲ್ಲೂಕಿನ ಕುದಿರಿ ಸಾಲೇವಾಡಿ ಗ್ರಾಮದಲ್ಲಿನ ಅಪ್ರಾಪ್ತ ದಲಿತ ಬಾಲಕಿಯರನ್ನು ಆತ್ಯಾಚಾರ ಮಾಡಿ, ಮೃತ ದೇಹಗಳನ್ನು ಬಾವಿಗೆ ಎಸೆದು ಕೊಲೆ ಮಾಡಲಾಗಿದೆ. ಈ ಕೃತ್ಯದಿಂದ ಇಡೀ ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರವೆ ಬಂಧಿಸಿ ಮೃತ ನೊಂದ ಕುಟುಂಬದವರಿಗೆ ಸರ್ಕಾರಿ ನೌಕರಿಯನ್ನು ಹಾಗೂ 25 ಲಕ್ಷ ರೂ.ಗಳ ಪರಿಹಾರ ಧನ ಮಂಜೂರು ಮಾಡಬೇಕು. ಆರೋಪಿಗಳನ್ನು ಗಡಿಪಾರು ಮಾಡಿ ಪ್ರಕರಣದ ತನಿಖೆಯನ್ನು ಮೇಲ್ಮಟ್ಟದ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಆ ಕುಟುಂಬದವರಿಗೆ ನ್ಯಾಯ ದೊರಕಿಸಿ ಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂದರ್ಭ ಜೀವಿಕ ಮಂಜು, ಬಾಲಕೃಷ್ಣ, ಟಿ.ಎಚ್.ಮೈಲಾರಪ್ಪ, ದೊಡ್ಡೇರಿ ಮಹಾಲಿಂಗಯ್ಯ, ನಾಗೇಶ್, ಕೆ.ಎಚ್.ರಂಗನಾಥ್ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ