ಮಧುಗಿರಿ :
ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತನೊಬ್ಬನ ಮೇಲೆ ಕರಡಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.
ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬಸವನಹಳ್ಳಿ ಗ್ರಾಮದ ವಾಸಿ ನಾಗರಾಜು (50) ಎನ್ನುವವರು ಜಮೀನಿನಲ್ಲಿ ಕೃಷಿಕಾಯಕದಲ್ಲಿ ನಿರತನಾಗಿದ್ದಾಗ ಸೋಮವಾರ ಬೆಳಗ್ಗೆ 6 ರ ಸಮಯದಲ್ಲಿ ಅವರ ಮೇಲೆ ಏಕಾಏಕಿ ಕರಡಿಯೊಂದು ದಾಳಿ ನಡೆಸಿದ್ದು, ನಾಗರಾಜುವಿನ ಕೈಗೆ ಗಂಭೀರವಾಗಿ ಗಾಯವಾಗಿದೆ.
ಗಾಯಾಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಸಂಜೆಯಾದರೂ ಸಹ ಅರಣ್ಯ ಇಲಾಖೆಯ ಸಿಬ್ಬಂದಿವರ್ಗದವರು ಆಸ್ಪತ್ರೆಗೆ ಭೇಟಿ ನೀಡಿಲ್ಲ ಎಂಬ ಆರೋಪ ಕುಟುಂಬ ವರ್ಗದವರಿಂದ ಕೇಳಿ ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
