ಭೋಪಾಲ್:
ಪ್ರವಾಹದ ಹಂತದಲ್ಲಿದ್ದ ರಾಯ್ಸೇನ್ ನದಿಗೆ ಬಸ್ ಉರುಳಿದ ಪರಿಣಾಮ ಆರು ಜನ ಜಲ ಸಮಾಧಿಯಾಗಿರುವ ದುರ್ಘಟನೆ ಮಧ್ಯರಾತ್ರಿ 1.30 ರ ಸುಮಾರಿನಲ್ಲಿ ಮಧ್ಯ ಪ್ರದೇಶದಲ್ಲಿ ನಡೆದಿದೆ.
ರಾಜಧಾನಿ ಭೂಪಾಲ್‍ಗೆ 40 ಕಿ.ಮೀ ಅಂತರದಲ್ಲೇ ಈ ದುರ್ಘಟನೆ ಸಂಭವಿಸಿದ್ದು, ಅತಿವೇಗದ ಚಾಲನೆಯಿಂದ ಬಸ್ ಸೇತುವೆಯ ಪಕ್ಕದ ಗೋಡೆ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್ ನದಿಗೆ ಉರುಳಿ ಬಿದ್ದಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.
ಬಸ್‌ನಲ್ಲಿ 45 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದು, ಘಟನೆಯಲ್ಲಿ 7 ಮಂದಿ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 11 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಭೂಪಾಲ್‍ಗೆ ಕಳುಹಿಸಲಾಗಿದೆ ಎನ್ನಲಾಗಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಸ್ಥಿತಿಯ ಪರಿಶೀಲನೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ