ಮಹಾ ಕುಂಭ ಮೇಳದಿಂದ ಉತ್ತರಪ್ರದೇಶಕ್ಕೆ ಬರುವ ಆದಾಯ ಕೇಳಿದ್ರೆ ಶಾಕ್‌ ಆಗೋದು ಪಕ್ಕಾ….!

ಉತ್ತರ ಪ್ರದೇಶ

   ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಮಹಾಕುಂಭ 2025 ರ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪ್ರಪಂಚದಾದ್ಯಂತದ 40 ಕೋಟಿ ಭಕ್ತರನ್ನು ಸ್ವಾಗತಿಸಲು ನಗರವು ಸಜ್ಜಾಗಿದೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ದೊಡ್ಡ ಮಟ್ಟದಲ್ಲಿ ಸಿದ್ಧತೆ ಆರಂಭಿಸಿದೆ. ಉತ್ತರ ಪ್ರದೇಶವು ಈ ಕುಂಭ ಮೇಳದಿಂದ ಗಳಿಸುವ ಆದಾಯವೆಷ್ಟು ಎಂಬುದರ ಕುರಿತು ಮಾಹಿತಿ ಇಲ್ಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಾ, ಮಹಾಕುಂಭಕ್ಕೆ 40 ಕೋಟಿ ಭಕ್ತರು ಬರುವ ಸಾಧ್ಯತೆಯಿದೆ ಮತ್ತು ಇದು ಉತ್ತರ ಪ್ರದೇಶಕ್ಕೆ 2 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಬೆಳವಣಿಗೆಯನ್ನು ತರುವ ನಿರೀಕ್ಷೆಯಿದೆ ಎಂದು ಬಹಿರಂಗಪಡಿಸಿದ್ದಾರೆ.

   ಮಹಾಕುಂಭವು ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾಗಿದೆ, ಇದು ಭಾರತ ಸೇರಿದಂತೆ ಇಡೀ ಜಗತ್ತಿಗೆ ತನ್ನ ಪ್ರಾಚೀನ ಸಂಪ್ರದಾಯಗಳ ಬಗ್ಗೆ ಹೆಮ್ಮೆ ಪಡಲು ಮತ್ತು ಅದರ ಸಾಂಸ್ಕೃತಿಕ ಬೇರುಗಳನ್ನು ಅರ್ಥಮಾಡಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ ಎಂದು ಸಿಎಂ ಯೋಗಿ ಹೇಳಿದ್ದಾರೆ.

   ಮಹಾಕುಂಭವು ಭವ್ಯ, ದೈವಿಕ ಮತ್ತು ಡಿಜಿಟಲ್ ಆಗಿರುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ದೇಶವು ತನ್ನ ಪ್ರಾಚೀನ ಪರಂಪರೆಯ ಬಗ್ಗೆ ಹೆಮ್ಮೆಪಡುತ್ತಿದೆ ಎಂದು ಸಿಎಂ ಯೋಗಿ ಹೇಳಿದ್ದಾರೆ. ಈ ಬಾರಿಯ ಮಹಾಕುಂಭ ಭವ್ಯ, ದಿವ್ಯ ಮತ್ತು ಡಿಜಿಟಲ್ ಆಗಲಿದೆ ಎಂದು ಸಿಎಂ ಯೋಗಿ ಹೇಳಿದ್ದಾರೆ. 

   1.5 ಲಕ್ಷಕ್ಕೂ ಹೆಚ್ಚು ಸ್ವಚ್ಛ ಮತ್ತು ಪರಿಸರ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅಲ್ಲದೆ, ಗಂಗಾ ಮತ್ತು ಯಮುನಾ ನದಿಗೆ ಯಾವುದೇ ರೀತಿಯ ಕೊಳಕು ನೀರು ಸೇರದಂತೆ ವ್ಯವಸ್ಥೆ ಮಾಡಲಾಗಿದೆ.

   ರಾಜ್ಯಕ್ಕೆ ಭಕ್ತರು ಬಂದಾಗ ಸಾರಿಗೆ, ವಸತಿ, ಊಟ ಸೇರಿದಂತೆ ಇನ್ನಿತರ ಕೆಲಸಗಳಿಗೆ ಹಣ ಖರ್ಚು ಮಾಡುತ್ತಾರೆ. ಇದು ಸ್ಥಳೀಯ ವ್ಯಾಪಾರ ಮತ್ತು ಉದ್ಯೋಗವನ್ನು ಉತ್ತೇಜಿಸುತ್ತದೆ. 2024 ರಲ್ಲಿ 16 ಕೋಟಿಗೂ ಹೆಚ್ಚು ಜನರು ಕಾಶಿ ವಿಶ್ವನಾಥನ ದರ್ಶನ ಪಡೆದಿದ್ದಾರೆ ಎಂದು ಸಿಎಂ ಯೋಗಿ ಹೇಳಿದ್ದಾರೆ. ಅದೇ ಸಮಯದಲ್ಲಿ, ಜನವರಿ 2024 ರಿಂದ ಸೆಪ್ಟೆಂಬರ್ ವರೆಗೆ 13 ಕೋಟಿ 55 ಲಕ್ಷಕ್ಕೂ ಹೆಚ್ಚು ಜನರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ.

   ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಇಂದು ಗುರುವಾರ ಪ್ರಯಾಗರಾಜ್‌ನ ಮಹಾಕುಂಭ ನಗರಕ್ಕೆ ಭೇಟಿ ನೀಡಲಿದ್ದಾರೆ. ಈ ಅವಧಿಯಲ್ಲಿ ಸಿಎಂ ಯೋಗಿ ಸಂತ ಸಮಾಜವನ್ನು ಭೇಟಿ ಮಾಡಿ ಸಿದ್ಧತೆಗಳ ಪರಿಶೀಲನೆ ನಡೆಸಲಿದ್ದಾರೆ. ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಕುಂಭಮೇಳ ನಡೆಯಲಿದೆ.

Recent Articles

spot_img

Related Stories

Share via
Copy link