ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವಪ್ರಕಾಶ್ ಕೊರೋನಾಗೆ ಬಲಿ!!

ಬೆಂಗಳೂರು:

       ಮಹಾಮಾರಿ ಕೊರೋನಾಗೆ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್(65) ನಿಧನರಾಗಿದ್ದಾರೆ.

       ಈ ಹಿಂದೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಅವರು ಕಾರ್ಯ ನಿರ್ವಹಿಸಿದ್ದರು.

     ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರಿಗೆ ಕೊರೊನಾ ಸೋಂಕು ತಗಲಿದ ಹಿನ್ನೆಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

      ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡಿದ್ದ ಅವರು ಅಂಕಣಕಾರರು, ರಾಜಕೀಯ ವಿಶ್ಲೇಷಕರಾಗಿ, ಬರಹಗಾರರಾಗಿ ಗುರುತಿಸಿಕೊಂಡಿದ್ದರು.