ಮಹಾಕುಂಭದಲ್ಲಿ ಮೃತಪಟ್ಟಿದ್ದ ಬೆಳಗಾವಿಯ ಕುಟುಂಬಸ್ಥರಿಗೆ ತಲುಪಿದ ಪರಿಹಾರ

ಬೆಂಗಳೂರು:

   ಮಾನವೀಯ ಮೌಲ್ಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ನಮ್ಮ ಬಿಜೆಪಿ ಸರ್ಕಾರ ಕುಂಭಮೇಳದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಘಟಿಸಿದ ಕಾಲ್ತುಳಿತದಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ 25 ಲಕ್ಷ ರೂ. ಪರಿಹಾರ ವಿತರಿಸುವ ಮೂಲಕ ತನ್ನ ಮಾನವೀಯ ಬದ್ಧತೆಯನ್ನು ಮೆರೆದಿದೆ, ಇದಕ್ಕಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆಗಳನ್ನು ಸಮರ್ಪಿಸುವೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

   ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತನ್ನ ರಾಜ್ಯ ಅಥವಾ ಹೊರಗಿನ ರಾಜ್ಯದವರು ಎನ್ನುವುದನ್ನು ಲೆಕ್ಕಿಸದೇ ಕುಂಭಮೇಳದಲ್ಲಿ ಭಾಗವಹಿಸಿದವರೆಲ್ಲರೂ ಈ ದೇಶದ ಸತ್ಪ್ರಜೆಗಳು ಎಂದು ಪರಿಗಣಿಸಿ ತನ್ನ ಪರಿಹಾರವನ್ನು ಘೋಷಿಸಲಾಗಿದೆ.

   ಆದರೆ ಕರ್ನಾಟಕ ಸರ್ಕಾರ ಇವರೆಗೂ ಇಂತಹ ಮಾನವೀಯ ನೆರವಿಗೆ ಮುಂದಾಗದಿರುವುದು ಬೇಸರದ ಸಂಗತಿ. ಧರ್ಮಗಳ ನಡುವೆ ಕಂದಕ ನಿರ್ಮಾಣ ಮಾಡುವ ಬಜೆಟ್ ಮಂಡಿಸಿ ಮುಸ್ಲಿಂ ಓಲೈಕೆಗಾಗಿ ಯೋಜನೆಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸನಾತನ ಹಿಂದೂ ಧರ್ಮದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ದುರ್ಮರಣಕ್ಕೀಡಾದವರ ಬಗ್ಗೆ ಕನಿಕರ ಮೂಡದಿರುವುದು ಅವರ ಧರ್ಮಬೇದದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ.

   ಈಗಲಾದರೂ ಮಾನ್ಯ ಮುಖ್ಯಮಂತ್ರಿಗಳು ಕುಂಭಮೇಳದಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರದ ಪರಿಹಾರವನ್ನು ಘೋಷಿಸಿ ತನ್ನ ಬದ್ಧತೆ ಪ್ರದರ್ಶಿಸಲಿ ಎಂದು ಒತ್ತಾಯಿಸುವೆ ಎಂದಿದ್ದಾರೆ.

Recent Articles

spot_img

Related Stories

Share via
Copy link