ನಾಯಕನಹಟ್ಟಿ :
ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಯೋಗ ಉತ್ತಮ. ಯೋಗ ಮಾಡುವುದರಿಂದ ನಿಮ್ಮ ಮನಸ್ಸಿಗೆ ದೇಹಕ್ಕೆ ಎರಡನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು ಎಂದು ಮಯೂರ ಇಂಟರ್ ನ್ಯಾಷನಲ್ ಶಾಲೆಯ ಮುಖ್ಯೋಪಾಧ್ಯಾಯರಾದ ಮಹಂತೇಶ್ ಹೇಳಿದ್ದಾರೆ.
ಪಟ್ಟಣದ ಮಯೂರ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶನಿವಾರ 11ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು ಯೋಗ ನಮ್ಮ ಭಾರತ ದೇಶದ ಹೆಮ್ಮೆಯ ಕೊಡುಗೆ. ಇದನ್ನು ಎಲ್ಲಾರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು. ವಿದ್ಯಾರ್ಥಿಗಳು ಪ್ರತಿದಿನ ಯೋಗ ಮಾಡಿದರೆ ನಿಮ್ಮೊಳಗೆ ಹೊಸ ಬದಲಾವಣೆ ಕಂಡುಕೊಳ್ಳಬಹುದು. ನಮ್ಮ ನಿಮ್ಮೆಲ್ಲರ ಆರೋಗ್ಯಕರ ಜೀವನಕ್ಕಾಗಿ ಪ್ರತಿಯೊಬ್ಬರು ಯೋಗ ಮಾಡಬೇಕು, ಇದರಿಂದ ನಾವು ರೋಗ ಮುಕ್ತರಾಗಿ ಬದುಕಲು ಸಾಧ್ಯವಾಗುತ್ತದೆ.
ಪ್ರತಿದಿನ ಯೋಗವನ್ನು ಮಾಡಿದರೆ ಮನಸ್ಸು ಶಾಂತವಾಗಿರುತ್ತದೆ. ಇದರಿಂದ ಮಾನಸಿಕವಾಗಿ ಸಂಪೂರ್ಣವಾಗಿ ಆರೋಗ್ಯವಾಗಿರಬಹುದು. ಮಕ್ಕಳು ಆಸಕ್ತಿಯಿಂದ ಯೋಗ ಮಾಡಿದರೆ ನಿಮ್ಮ ಬುದ್ಧಿ ಚುರುಕಾಗುತ್ತದೆ. ಜನಗಳು ಅನುಭವಿಸುತ್ತಿರುವ ಪ್ರಮುಖ ಸಮಸ್ಯೆ ಎಂದರೆ ಅದು ಒತ್ತಡ. ಇದಕ್ಕಾಗಿ ರೋಗ ಪರಿಹಾರವನ್ನು ಒದಗಿಸುತ್ತವೆ ಎಂದರು. ಯೋಗ ಆರೋಗ್ಯಕ್ಕೆ ಒಳ್ಳೆಯದು, ಯೋಗ ಮಾಡುವಾಗ ಏಕಾಗ್ರತೆ ಮುಖ್ಯವಾಗಿರುತ್ತದೆ ಎಂದರು.
ಯೋಗಾಸನಗಳು ಪ್ರತಿದಿನ ಮಾಡುವುದರಿಂದ ಅನೇಕ ಕಾಯಿಲೆಗಳು ರೋಗಗಳ ವಿರುದ್ಧ ಹೋರಾಡಬಹುದು. ಯೋಗವು ಮಾನಸಿಕ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ. ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಒತ್ತಡದಿಂದ ಮುಕ್ತಿ ವಿಶ್ರಾಂತಿಗೆ ಯೋಗ ಸಹಾಯ ಮಾಡುತ್ತದೆ. ಯೋಗ ಅನೇಕ ಆರೋಗ್ಯ ಸಮಸ್ಯೆಯನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಯಿಸುತ್ತದೆ ಎಂದು ಹೇಳಿದರು.








