ಮಹಾರಾಷ್ಟ್ರ: ಸಿಎಂ ಪದಗ್ರಹಣ, ಆಹ್ವಾನ ಪತ್ರಿಕೆಯಲ್ಲಿ ಶಿಂಧೆ ಹೆಸರು ನಾಪತ್ತೆ!

ಮುಂಬೈ:

    ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಸಂಜೆ 5-30ಕ್ಕೆ ದಕ್ಷಿಣ ಮುಂಬೈಯ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಕೇಂದ್ರ ಸಚಿವರು, ಎನ್ ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

    ನೂತನ ಸಿಎಂ ಪದಗ್ರಹಣದ ಆಹ್ವಾನ ಪತ್ರಿಕೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೆಸರು ಇಲ್ಲದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಹೌದು NCP ಯ ಆಹ್ವಾನ ಪತ್ರಿಕೆಯಲ್ಲಿ ನೂತನ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಏಕನಾಥ್ ಶಿಂಧೆ ಅವರ ಹೆಸರೇ ಕಾಣುತ್ತಿಲ್ಲ.

   ಹಂಗಾಮಿ ಸಿಎಂ ಏಕನಾಥ್ ಶಿಂಧೆ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಬಗ್ಗೆ ಸ್ಪಷ್ಟತೆ ಇದ್ದಂತಿಲ್ಲ. ನಿನ್ನೆ ಸುದ್ದಿಗೋಷ್ಠಿ ವೇಳೆಯೂ ಡಿಸಿಎಂ ಆಗಿ ಹೊಸ ಸರ್ಕಾರದ ಭಾಗವಾಗುತ್ತಾರೆಯೇ ಎಂದು ಕೇಳಿದಾಗ ಶಿಂಧೆ ಅವರು ಉತ್ತರಿಸಲಿಲ್ಲ. ಈ ಬಗ್ಗೆ ಯೋಚಿಸಲು ಸಮಯಾವಕಾಶ ಬೇಕಿದ್ದು, ಬೆಂಬಲಿಗರ ಸಲಹೆ ಪಡೆದು ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು. 

  ಶಿಂಧೆ ಅವರು ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಬಯಸಿದ್ದಾರೆ.ಆದರೆ ಗೃಹ ಖಾತೆಯನ್ನು ನೀಡಬೇಕು ಮತ್ತು ಅವರ ಸಚಿವಾಲಯದಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು ಎಂದು ಷರತ್ತು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

Recent Articles

spot_img

Related Stories

Share via
Copy link