KSRTC ಕೇಂದ್ರ ಕಚೇರಿಗೆ ಮಹಾರಾಷ್ಟ್ರ ಸಾರಿಗೆ ಸಚಿವರ ಭೇಟಿ….!

ಬೆಂಗಳೂರು:

   ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಗೆ ಹಾಗೂ ಕಾರ್ಯಾಗಾರಕ್ಕೆ ಭಾನುವಾರ ಭೇಟಿ ನೀಡಿದ ಮಹಾರಾಷ್ಟ್ರ ಸರಕಾರದ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು, ನಿಗಮದ ಕಾರ್ಯವೈಖರಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

   ಮಹಾರಾಷ್ಟ್ರ ಸರಕಾರದ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ನೇತೃತ್ವದ ಮಹಾರಾಷ್ಟ್ರದ ಅಧಿಕಾರಿಗಳ ತಂಡವು ನಗರ ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ, ಕಾರ್ಯಾಗಾರಕ್ಕೆ ಭೇಟಿ ನೀಡಿತು. ಇದೇ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿಗಮದಲ್ಲಿನ ಪ್ರತಿಷ್ಠಿತ ವಾಹನಗಳ ಕಾರ್ಯಾಚರಣೆ, ಕಾರ್ಮಿಕ ಕಲ್ಯಾಣ ಉಪಕ್ರಮಗಳು, ವಾಣಿಜ್ಯ ಆದಾಯ, ಬಸ್ಸುಗಳ ಪುನಃಶ್ಚೇತನ/ನವೀಕರಣ, ಹೆಚ್.ಆರ್.ಎಂ.ಎಸ್, ಇ-ಟೆಕೇಟಿಂಗ್, ಕೆ.ಎಸ್.ಆರ್.ಟಿ.ಸಿ. ಆರೋಗ್ಯ, ರೂ 1 ಕೋಟಿ ಅಪಘಾತ ವಿಮೆ, ಇತರೆ ಉಪಕ್ರಮಗಳ ಬಗ್ಗೆ ಪ್ರತಾಪ್ ಅವರಿಗೆ ಮಾಹಿತಿ ನೀಡಿದರು.

   ಬಳಿಕ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ತಂಡವು ಐರಾವತ ಕ್ಲಬ್ ಕಾಸ್, ಐರಾವತ ಕ್ಲಬ್ ಕಾಸ್ 2.0, ಅಂಬಾರಿ ಡ್ರೀಮ್ ಕ್ಲಾಸ್, ಪಲ್ಲಕ್ಕಿ, ಅಂಬಾರಿ ಉತ್ಸವ, ಫ್ಲೈ ಬಸ್, ನಗರ ಸಾರಿಗೆ, ರಾಜಹಂಸ ಹಾಗೂ ಅಶ್ವಮೇಧ ವಾಹನಗಳನ್ನು ವೀಕ್ಷಿಸಿದರು.

   ಘಟಕ ಹಾಗೂ ಕಾರ್ಯಾಗಾರ ನಿರ್ವಹಣೆ, ವಾಹನಗಳಿಗೆ ನೀಡಿರುವ ಬ್ರಾಂಡಿಗ್ ಹಾಗೂ ವಾಹನಗಳ ಪುನಶ್ಚೇತನ ಕಾರ್ಯ ಹಾಗೂ ಹಲವು ಉಪಕ್ರಮಗಳ ಕುರಿತು ಮುಕ್ತ ಕಂಠದಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

   ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಬೆಂ.ಮ.ಸಾ. ಸಂಸ್ಥೆ, ಹಾಗೂ ಮಾನ್ಯ ನಿರ್ದೇಶಕರು (ಸಿ ಮತ್ತು ಜಾ), ಅಪರ ಸಾರಿಗೆ ಆಯುಕ್ತರು, (ಪ್ರವರ್ತನ) (ದಕ್ಷಿಣ), ಹಾಗೂ ಎಂ.ಎಸ್.ಆರ್.ಟಿ.ಸಿ. ತಾಂತ್ರಿಕ, ಸಂಚಾರ ಹಾಗೂ ಕಾಮಗಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಕರಾರಸಾ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link