ಬೆಳಗಾವಿ : ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ

ಬೆಳಗಾವಿ :

   1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಬೆಳಗಾವಿ ನಗರದ ಟಿಳಕವಾಡಿಯ ವೀರಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣಗೊಳಿಸಿದರು.ಇದೇ ಸಂದರ್ಭದಲ್ಲಿ ನವೀಕೃತ ಫೋಟೋ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‌ಅವರು ಲೋಕಾರ್ಪಣೆಗೊಳಿಸಿದರು.

   ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಪ್ರಕಾಶ್ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ‌ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವರು ಹಾಗೂ ಶಾಸಕರಾದ ಆರ್.ವಿ.ದೇಶಪಾಂಡೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕರಾದ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link