ಬೆಂಗಳೂರು:
ಮಹಾತ್ಮ ಗಾಂಧೀಜಿ ಅವರ ಧರ್ಮಪತ್ನಿ ಕಸ್ತೂರ ಬಾ ಅವರು ಕೂಡ ತಲೆಗೆ ಸೆರಗು ಹಾಕುತ್ತಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಿಜಾಬ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಫೋಟೋದಲ್ಲೆಲ್ಲ ನೋಡಿದ್ದೇವೆ.ಕಸ್ತೂರ ಬಾ ಅವರು ಕೂಡ ತಲೆಗೆ ಸೆರಗು ಹಾಕುತ್ತಿದ್ದರು. ಎಷ್ಟೋ ಬಾರಿ ಬಿಸಿಲಿನ ತಾಪಕ್ಕೆ ಹಿಂದೂ, ಮುಸ್ಲಿಂ ಹೆಣ್ಣುಮಕ್ಕಳು ಶಾಲೆಗೆ ಹೋಗುವಾಗ ಸಮವಸ್ತ್ರದೊಂದಿಗೆ ತಲೆಗೆ ದುಪ್ಪಟ್ಟ ಥರ ಹಾಕುತ್ತಿದ್ದರು.
SSLC’ ವಿದ್ಯಾರ್ಥಿಗಳೇ ಗಮನಿಸಿ : ನಿಮ್ಮ ಪೋಷಕರ ಫೋನ್ ಗೆ ಬರಲಿದೆ ಪರೀಕ್ಷಾ ಕೊಠಡಿಯ ಮಾಹಿತಿ!
ಅದಕ್ಕೆ ಸಂಬಂಧಿಸಿದ ಫೋಟೋಗಳು ಕೂಡ ನಮ್ಮ ಬಳಿ ಇವೆ. ಎಲ್ಲಾ ಸಮುದಾಯದ ಹೆಣ್ಣುಮಕ್ಕಳು ಯಾವುದೇ ವಿವಾದವಿಲ್ಲದೇ ಕೈಕೈ ಹಿಡಿದು ಶಾಲೆಗೆ ಹೋಗುತ್ತಿರುವ ಫೋಟೋಗಳು ಕೂಡ ಇವೆ. ಅದನ್ನು ಈಗ ವಿವಾದ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಹೆಣ್ಣು ಮಕ್ಕಳು ಸಮವಸ್ತ್ರದ ಜೊತೆಗೆ ಅನೇಕ ಸಂದರ್ಭಗಳಲ್ಲಿ ತಮಗೆ ಬೇಕಾದಂತೆ ದುಪ್ಪಟ್ಟ ಧರಿಸುತ್ತಾರೆ. ಅದನ್ನು ವಿವಾದ ಮಾಡುವುದನ್ನು ಬಿಟ್ಟು ಸರ್ಕಾರ ಸಮವಸ್ತ್ರಕ್ಕೆ ಪೂರಕವಾಗಿ ದುಪ್ಪಟ್ಟ ಹಾಕಿ ಬರುವುದಕ್ಕೆ ಅವಕಾಶ ಮಾಡಿಕೊಡಲಿ.
ತಲೆ ಮೇಲೆ ಸೆರಗಿನ ರೀತಿ ವಸ್ತ್ರವನ್ನು ಹಾಕಿಕೊಂಡು ಬರುವುದಕ್ಕೆ ಅವಕಾಶ ಮಾಡಿಕೊಟ್ಟರೆ ಮುಗಿದೇ ಹೋಯಿತು. ಅದನ್ನು ವಿವಾದ ಮಾಡುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ಈ ಎಲ್ಲಾ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುವುದಾಗಿ ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
