ಬೆಂಗಳೂರು:
ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ವಿಧಾನಸೌಧದ ಮುಂಭಾಗ ಸೋಮವಾರ ನಡೆದಿದೆ.
ಶಾಸಕರ ಭವನದಿಂದ ಬರುವಾಗ ಶಾಸಕ ಮಹಾಂತೇಶ್ ಕೌಜಲಗಿ ಕಾರಿಗೆ ಅತಿವೇಗವಾಗಿ ಬಂದ ಪೊಲೋ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮಹಾಂತೇಶ್ ಕೌಜಲಗಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.