ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ : ಸ್ವಪ್ಲದರಲ್ಲೇ ತಪ್ಪಿದ ಭಾರಿ ಅನಾಹುತ

ನವದೆಹಲಿ:

      ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದ್ದು ಭಾರೀ ಭದ್ರತಾ ಲೋಪವುಂಟಾದ ಪ್ರಸಂಗ ನಡೆದಿದೆ.

     ಇದರಿಂದ ಗೊಂದಲದ ವಾತಾವರಣ ಉಂಟಾಗಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದು ಬೆಂಚುಗಳ ಮೇಲೆ ಘೋಷಣೆ ಕೂಗುತ್ತಾ ಇಬ್ಬರು ಹಾರುತ್ತಿರುವುದು ಕಂಡುಬಂದಿತು.

    ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳುವಂತೆ ಇಬ್ಬರು ಸಾರ್ವಜನಿಕ ಗ್ಯಾಲರಿಯಿಂದ ಜಿಗಿದಿದ್ದಾರೆ. ಶೂನ್ಯ ವೇಳೆಯಲ್ಲಿ ಒಬ್ಬರು ಅಶ್ರುವಾಯು ಎರಚುತ್ತಾ ಸಾರ್ವಜನಿಕ ಗ್ಯಾಲರಿಯಿಂದ ಜಿಗಿದರೆ ಮತ್ತೊಬ್ಬ ಲೋಕಸಭೆಯ ಬೆಂಚುಗಳ ಮೇಲೆ ಹಾರುತ್ತಿರುವುದು ಕಂಡುಬಂದಿದೆ ಎಂದು ಚೌಧರಿ ಹೇಳಿದರು.

    ಕೂಡಲೇ ಇಬ್ಬರು ವ್ಯಕ್ತಿಗಳ ಮೇಲೆ ಅಲ್ಲಿದ್ದ ಲೋಕಸಭಾ ಸದಸ್ಯರು ನಿಯಂತ್ರಿಸಲು ಹೋಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಲೋಕಸಭಾಧ್ಯಕ್ಷರ ಸ್ಥಾನದಲ್ಲಿದ್ದ ಬಿಜೆಪಿ ಸದಸ್ಯ ರಾಜೇಂದ್ರ ಅಗರವಾಲ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

    ಇದು ಭದ್ರತಾ ಉಲ್ಲಂಘನೆಯಾಗಿದೆ. ಇಂದು ನಾವು 2001 ರಲ್ಲಿ ನಡೆದ ಸಂಸತ್ತಿನ ದಾಳಿಯ 22ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿರುವುದು ದುರದೃಷ್ಟಕರ ಎಂದು ಅಧೀರ್ ರಂಜನ್ ಚೌಧರಿ ಹೇಳಿದರು.

    ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್, “ಇಬ್ಬರು ಯುವಕರು ಸಂಸತ್ತಿನ ಗ್ಯಾಲರಿಯೊಳಗಿನ ಡಬ್ಬಿಗಳಿಂದ ಹಳದಿ ಬಣ್ಣದ ಅನಿಲದ ದುರ್ವಾಸನೆ ಬೀರುತ್ತಾ ಬಂದರು” ಎಂದಿದ್ದಾರೆ .ಅಲ್ಲಿದ್ದ ಸಂಸದರು ವ್ಯಕ್ತಿಗಳನ್ನು ಹಿಡಿಯಲು ನೋಡಿದರು. ಒಬ್ಬ ವ್ಯಕ್ತಿ ಕೆಲವು ಘೋಷಣೆಗಳನ್ನು ಕೂಗುತ್ತಿದ್ದ. ಇದು ಹೊಸ ಸಂಸತ್ ಕಟ್ಟಡದ ಭದ್ರತೆ ಬಗ್ಗೆ ಗಂಭೀರವಾಗಿ ಪ್ರಶ್ನೆ ಎತ್ತುವಂತೆ ಮಾಡುತ್ತದೆ ಎಂದರು.

    ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಖಗೇನ್ ಮುರ್ಮು ಲೋಕಸಭೆಯಲ್ಲಿ ಮಾತನಾಡುತ್ತಿದ್ದಾಗ ಲೋಕಸಭೆಯೊಳಗೆ ವ್ಯಕ್ತಿಗಳು ಒಳನುಗ್ಗಿದ್ದಾರೆ. ಮಧ್ಯಾಹ್ನ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಲಾಯಿತು.

    ನಾಲ್ವರು ಪೊಲೀಸರ ವಶ: ಘಟನೆಗೆ ಸಂಬಂಧಿಸಿದಂತೆ ಸದನದೊಳಗೆ ನುಗ್ಗಿ ದಾಂಧಲೆ ನಡೆಸಿದ ಇಬ್ಬರು ಹಾಗೂ ಹಳದಿ ಬಣ್ಣದ ಹೊಗೆಯನ್ನು ಹೊರಸೂಸುವ ಕ್ಯಾನ್‌ಗಳನ್ನು ಹೊತ್ತು ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆ ಸೇರಿ ಮತ್ತೊಬ್ಬ ಯುವಕ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

   ಸಂಸತ್ತಿನ ಒಳಗೆ ನುಗ್ಗಿದ ಒಬ್ಬಾತನನ್ನು ಸಾಗರ್ ಶರ್ಮಾ ಹಾಗೂ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರಲ್ಲಿ ಒಬ್ಬ ಮಹಿಳೆ ನೀಲಂ (42) ಮತ್ತು ಅಮೋಲ್ ಶಿಂಧೆ (25) ಎಂದು ಗುರುತಿಸಲಾಗಿದ್ದು, ನಾಲ್ವರನ್ನು ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ನಂತರ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

    ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಸಂಘಟನೆಗಳ ಭಯೋತ್ಪಾದಕರು 2001 ರಲ್ಲಿ ಇದೇ ದಿನ ಸಂಸತ್ತಿನ ಮೇಲೆ ದಾಳಿ ಮಾಡಿ ಒಂಬತ್ತು ಜನರನ್ನು ಕೊಂದು ಹಾಕಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap