ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ….!

ಬೆಂಗಳೂರು:

     ಕಾಂಗ್ರೆಸ್ ನೇತೃತ್ವದ ನೂತನ ರಾಜ್ಯ​ ಸರ್ಕಾರವು ಅಧಿಕಾರಕ್ಕೇರಿದಾಗಿನಿಂದಲೂ ಆಡಳಿತದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದು, ಇದೀಗ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಸಂಜೆ ಆದೇಶಿಸಿದೆ.

   ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಕಾರ, ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಜಾವೇದ್ ಅಖ್ತರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (ವೈದ್ಯಕೀಯ ಶಿಕ್ಷಣ) ಎಸಿಎಸ್ ಆಗಿ ವರ್ಗಾವಣೆ ಮಾಡಲಾಗಿದೆ.

    ಕೊಡಗು ಜಿಲ್ಲಾಧಿಕಾರಿಯಾಗಿ (ಡಿಸಿ) ಸೇವೆ ಸಲ್ಲಿಸುತ್ತಿದ್ದ ಬಿ.ಸಿ. ಸತೀಶ ಅವರನ್ನು ವರ್ಗಾವಣೆ ಮಾಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಅವರ ಜಾಗಕ್ಕೆ ಕೋಲಾರ ಡಿಸಿ ಆಗಿದ್ದ ವೆಂಕಟ್ ರಾಜಾ ಅವರನ್ನು ನೇಮಿಸಲಾಗಿದೆ. 

 

    ಗಂಗೂಬಾಯಿ ರಮೇಶ್ ಮಾನಕರ್ ಅವರು ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ನೇಮಕಗೊಂಡರೆ, ಡಾ. ಗೋಪಾಲ್ ಕೃಷ್ಣ ಎಚ್ಎನ್ ಅವರನ್ನು ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿಯ ಜಂಟಿ ನಿರ್ದೇಶಕರಾಗಿ ವರ್ಗ ಮಾಡಲಾಗಿದೆ. ನಾಗರಾಜ ಎನ್‌ಎಂ ಅವರನ್ನು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಯೋಜನಾ ನಿರ್ದೇಶಕರಾಗಿ ಮತ್ತು ಭನ್ವರ್ ಸಿಂಗ್ ಮೀನಾ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

    ಮಹದೇವಪುರ ವಲಯ ಬಿಬಿಎಂಪಿ ಜಂಟಿ ಆಯುಕ್ತರಾಗಿದ್ದ ಲಿಂಗಮೂರ್ತಿ ಜಿ ಅವರು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap