ನವದೆಹಲಿ:
ಲೋಕಸಭಾ ಚುನಾವಣೆಯ 4 ನೇ ಹಂತದ ಮತದಾನ ಇಂದು ಪ್ರಾರಂಭವಾಗುತ್ತಿದ್ದಂತೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಜನರು ತಮ್ಮ ಕರ್ತವ್ಯವನ್ನು ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಕ್ಷೇತ್ರಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಪ್ರಧಾನಿ ವ್ಯಕ್ತಪಡಿಸಿದರು.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ, ಲೋಕಸಭಾ ಚುನಾವಣೆಯ ಇಂದಿನ 4 ನೇ ಹಂತದಲ್ಲಿ, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 96 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಕ್ಷೇತ್ರಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ. ಈ ಮೂಲಕ ಯುವ ಮತದಾರರು ಮತ್ತು ಮಹಿಳಾ ಮತದಾರರು ಶಕ್ತಿ ನೀಡಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ಬನ್ನಿ ಎಲ್ಲರೂ ನಮ್ಮ ಕರ್ತವ್ಯವನ್ನು ಮಾಡೋಣ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸೋಣ ಎಂದು ಹೇಳಿದ್ದಾರೆ.
ಇದೇ ವೇಳೆ ವಿಧಾನಸಭಾ ಚುನಾವಣೆಯಲ್ಲಿಯೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಆಂಧ್ರಪ್ರದೇಶದ ಜನರಿಗೆ ಕರೆ ನೀಡಿದ ಪ್ರಧಾನಿ, ವಿಶೇಷವಾಗಿ ಮೊದಲ ಬಾರಿಗೆ ಮತದಾರರಲ್ಲಿ ಮನವಿ ಮಾಡಿದರು. ನಮ್ಮ ಪ್ರಜಾಸತ್ತಾತ್ಮಕ ಮನೋಭಾವವನ್ನು ಇನ್ನಷ್ಟು ಹೆಚ್ಚಿಸಲಿ ಎಂದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
