ಕಡೇ ಕಾರ್ತಿಕ ಸೋಮವಾರ : ಮಲೆ ಮಹದೇಶ್ವರ ಕ್ಷೇತ್ರ ಮೂರು ದಿನ ಬಂದ್‌!!

ಚಾಮರಾಜನಗರ :  

      ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಡಿಸೆಂಬರ್ 12 ರಿಂದ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

      ಕಡೆ ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಬರುವ ಸಾಧ್ಯತೆಯಿದ್ದು, ಕೊರೊನಾ ಮುಂಜಾಗೃತೆ ಕ್ರಮವಾಗಿ ಡಿಸೆಂಬರ್ 12 ರಿಂದ 14 ರ ವರೆಗೆ ದೇವಾಲಯದ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ.

      ಡಿ.14 ರಂದು ಕಡೇ ಕಾರ್ತಿಕ ಸೋಮವಾರವಾಗಿದ್ದು, ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಕಾರ್ತಿಕ ಸೋಮವಾರದಂದು ಎಣ್ಣೆ ಮಜ್ಜನ, ತೆಪ್ಪೋತ್ಸವ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರುತ್ತವೆ. ಆದರೆ ಈ ಬಾರಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಭಕ್ತರಿಗೆ ಮಾದಪ್ಪನ ದರ್ಶನಕ್ಕೆ ಅವಕಾಶ ನೀಡಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap