ಒಂದು ರಾಷ್ಟ್ರ ಒಂದು ಚುನಾವಣೆ: ಗಮನ ಬೇರೆಡೆ ಸೆಳೆಯಲು ಬಿಜೆಪಿ ತಂತ್ರ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ:

   ಚುನಾವಣೆ ಸಮೀಪಿಸುತ್ತಿರುವಾಗ ನೈಜ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಬಿಜೆಪಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿಷಯ ಮುಂದಿಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

   ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿರುವ ಕುರಿತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕೆಲ ರಾಜ್ಯಗಳ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಜನರ ಗಮನ ಬೇರೆಡೆ ಸೆಳೆಯಲು ಇಂಥ ತಂತ್ರವನ್ನು ಹೂಡಿದೆ, ಇದು ಪ್ರಾಯೋಗಿಕವಾಗಿ ಅಸಾಧ್ಯ.

   ಯಾವುದೇ ಚುನಾವಣೆ ಬಂದರೂ, ಒಂದು ವಿಷಯವನ್ನು ಚರ್ಚೆಗೆ ಹುಡುಕಿಕೊಳ್ಳುವುದು ಬಿಜೆಪಿಯವರ ತಂತ್ರ. ಇದರಿಂದ ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಮರೆಮಾಚಿ, ಈ ವಿಷಯವನ್ನೇ ಚರ್ಚಿಸುವಂತೆ ಮಾಡುತ್ತಾರೆ ಎಂದಿದ್ದಾರೆ.

Recent Articles

spot_img

Related Stories

Share via
Copy link
Powered by Social Snap