ರಾಜ್ಯದ ಜನರಿಗಾಗಿ ನಾನು ರಾಜೀನಾಮೆ ನೀಡಲು ಸಿದ್ಧ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ : 

   ಜನರ ಹಿತಕ್ಕಾಗಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದ ಆದರೆ ಸಂತ್ರಸ್ತೆಗೆ ನ್ಯಾಯ ಸಿಗಲೇಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ

   ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ಆರ್.ಜೆ.ಕರ್ ಬಿಕ್ಕಟ್ಟು ಇಂದು ಅಂತ್ಯವಾಗಲಿದೆ ಎಂದು ನಿರೀಕ್ಷಿಸಿದ್ದ ಬಂಗಾಳದ ಜನರಲ್ಲಿ ಕ್ಷಮೆ ಕೋರುತ್ತೇನೆ. ಕಿರಿಯ ವೈದ್ಯರು ಸಭೆಗೆ ಬರಲಿಲ್ಲ. ಅವರೆಲ್ಲರೂ ಮತ್ತೆ ಸೇವೆಗೆ ಮರಳುವಂತೆ ಮನವಿ ಮಾಡುತ್ತೇನೆ” ಎಂದರು.

  ಕಳೆದ 3 ದಿನಗಳಿಂದ ನನ್ನ ಸದುದ್ದೇಶ ಮತ್ತು ಪ್ರಯತ್ನಗಳ ಮಧ್ಯೆಯೂ ಕಿರಿಯ ವೈದ್ಯರು ಮಾತುಕತೆ ನಡೆಸಲು ನಿರಾಕರಿಸಿದ್ದಾರೆ. ನಾನು ರಾಜ್ಯದ ಜನರ ಹಿತದೃಷ್ಟಿಯಿಂದ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಕಿರಿಯ ವೈದ್ಯರು ಸೇವೆ ನಿಲ್ಲಿಸಿದ್ದರಿಂದ 27 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ಏಳು ಲಕ್ಷ ಜನರ ಮೇಲೆ ಪರಿಣಾಮ ಬೀರುತ್ತಿದೆ. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಆದರೆ ಸುಪ್ರೀಂ ಕೋರ್ಟ್ ತೀರ್ಪಿನಂತೆ ವೈದ್ಯರು ಮತ್ತೆ ಕೆಲಸಕ್ಕೆ ಸೇರಿಕೊಳ್ಳಬೇಕು ಎಂದು ಮನವಿ ಮಾಡಿದ್ದಾಋಎ

   ನಾವು ಧರಣಿ ನಿರತ ವೈದ್ಯರ ವಿರುದ್ಧವಾಗಿ ಹೋಗುತ್ತಿಲ್ಲ. ಕಿರಿಯ ವೈದ್ಯರಿಗಿಂತ ದೊಡ್ಡವಳೆಂಬ ಕಾರಣಕ್ಕೆ ಅವರನ್ನು ಕ್ಷಮಿಸಿದ್ದೇನೆ. ಸಭೆಗೆ ಬಾರದೇ ಕಾಯಿಸಿದ ವೈದ್ಯರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಏಕೆಂದರೆ ಹಿರಿಯರಾಗಿ, ಕಿರಿಯರನ್ನು ಕ್ಷಮಿಸುವುದು ನಮ್ಮ ಜವಾಬ್ದಾರಿ” ಎಂದರು.

   “ವೈದ್ಯರು ಬರುತ್ತಾರೆ ಎಂದು ನಾನು ಮೂರು ದಿನಗಳಿಂದ ಕಾಯುತ್ತಿದ್ದೆ. ಆದರೆ ಅವರು ಬರಲಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಉಲ್ಲಂಘಿಸಿದ್ದಾರೆ. ಮತ್ತೆ ಕೆಲಸಕ್ಕೆ ಸೇರಿಲ್ಲ. ಆದರೆ ನಾವು ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ ಕೆಲ ಸಂದರ್ಭಗಳನ್ನು ತಾಳ್ಮೆಯಿಂದ ಎದುರಿಸಬೇಕಾಗುತ್ತದೆ. ಚರ್ಚೆಗಳ ಮೂಲಕವೇ ಪರಿಹಾರಗಳನ್ನು ತಲುಪಲು ಸಾಧ್ಯವಾದ್ದರಿಂದ ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಬೇಕಿದೆ” ಎಂದು ಮಮತಾ ಅಭಿಪ್ರಾಯಪಟ್ಟರು.

Recent Articles

spot_img

Related Stories

Share via
Copy link
Powered by Social Snap