ಬಿಜೆಪಿಯಿಂದ ನಕಲಿ ಮತದಾರರ ಬಳಕೆ: ಚು. ಆಯೋಗದ ನಿಷ್ಪಕ್ಷಪಾತತೆ ಪ್ರಶ್ನಿಸಿದ ಮಮತಾ

ಕೋಲ್ಕತ್ತಾ:

   ದೆಹಲಿ ಮತ್ತು ಮಹಾರಾಷ್ಟ್ರದ ಚುನಾವಣೆಗಳ ಮೇಲೆ ಪ್ರಭಾವ ಬೀರಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಹರಿಯಾಣ ಮತ್ತು ಗುಜರಾತ್‌ನ ನಕಲಿ ಮತದಾರರನ್ನು ಸೇರಿಸಿಕೊಂಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಆರೋಪಿಸಿದ್ದಾರೆ.

   ಕೋಲ್ಕತ್ತಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಭೆಯಲ್ಲಿ ಮಾತನಾಡಿದ ಬ್ಯಾನರ್ಜಿ, ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಉಳಿಯದ ಹೊರತು ನ್ಯಾಯಯುತ ಚುನಾವಣೆ ಅಸಾಧ್ಯ ಎಂದರು.

  ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ(ಸಿಇಸಿ) ಆತುರದಿಂದ ನೇಮಕ ಮಾಡುವ ಮೂಲಕ ಮತದಾನದ ಮೇಲೆ ಪ್ರಭಾವ ಬೀರಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ದೀದಿ ಟೀಕಿಸಿದರು. ಚುನಾವಣಾ ವ್ಯವಸ್ಥೆಯನ್ನು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಕೇಂದ್ರ ಚುನಾವಣಾ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಬ್ಯಾನರ್ಜಿ ಎಚ್ಚರಿಸಿದ್ದಾರೆ.

  “ಚುನಾವಣಾ ಆಯೋಗದ ಆಶೀರ್ವಾದದೊಂದಿಗೆ ಬಿಜೆಪಿ ಮತದಾರರ ಪಟ್ಟಿಯನ್ನು ಹೇಗೆ ಕುಶಲತೆಯಿಂದ ನಿರ್ವಹಿಸುತ್ತಿದೆ ಎಂಬುದು ತುಂಬಾ ಸ್ಪಷ್ಟವಾಗಿದೆ” ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.ಮತದಾರರ ಪಟ್ಟಿಯನ್ನು ಸರಿಪಡಿಸುವಂತೆ ಮತ್ತು ನಕಲಿ ಮತದಾರರನ್ನು ತೆಗೆದುಹಾಕುವಂತೆ ಒತ್ತಾಯಿಸ ನಾವು ಚುನಾವಣಾ ಆಯೋಗದ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಬಹುದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

  ಮುಂಬರುವ 2026 ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಸಿಎಂ 215 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಮತ್ತೆ ಅಧಿಕಾರಕ್ಕೆ ಬರಲಿದೆ ಮತ್ತು ಬಿಜೆಪಿಯ ಸಂಖ್ಯೆಯನ್ನು ಗಮನಾರ್ಹವಾಗಿ ಇಳಿಸಿಲಾಗುವುದು ಎಂದು ಪ್ರತಿಪಾದಿಸಿದರು. 2021 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 77 ಸ್ಥಾನಗಳನ್ನು ಗೆದ್ದುಕೊಂಡಿದೆ.

   “ಮುಂದಿನ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಾವು 294 ರಲ್ಲಿ 215 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಮತ್ತು ಬಿಜೆಪಿಯ ಸಂಖ್ಯೆ ಮತ್ತಷ್ಟು ಕುಸಿಯುವಂತೆ ನೋಡಿಕೊಳ್ಳುತ್ತೇವೆ” ಎಂದು ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

 

Recent Articles

spot_img

Related Stories

Share via
Copy link