ʻCMVʼ ಮಾನದಂಡದಂತೆ ʻಹೆಡ್‌ ಲೈಟ್‌ʼ ಕಡ್ಡಾಯ : ಉಲ್ಲಂಘಿಸಿದ್ರೆ ದಂಡ ಫಿಕ್ಸ್

ಬೆಂಗಳೂರು :

    ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಆಲೋಕ್‌ ಕುಮಾರ್‌ ಸೂಚಿಸಿದ್ದಾರೆ.

    ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದ್ದು ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ.

    ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್. ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ (dazzling and glaring) ಎಲ್‌ ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗು ತ್ತಿರುತ್ತದೆ. ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್‌ ಲೈಟ್‌ ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ.

   ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ.

    ಆದ್ದರಿಂದ, ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ, ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಈ ರೀತಿ ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮ ಬಗ್ಗೆ, ಪಾಲನಾ ವರದಿಯನ್ನು ದಿನಾಂಕ 31.07.2024 ರೊಳಗಾಗಿ ಈ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap