ನೀರಿನ ವಿಚಾರದಲ್ಲಿ ರಾಜಕೀಯ ಬೇಡ :ಚಲುವರಾಯಸ್ವಾಮಿ

Screenshot

ಮಂಡ್ಯ: ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬಿಗೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡಬೇಕು ಎಂಬ ರೈತರ ಬೇಡಿಕೆ ನ್ಯಾಯಯುತವಾಗಿದೆ. ಈ ಬಗ್ಗೆ ವಿರೋಧಪಕ್ಷಗಳು ಕೂಡ ಸರ್ಕಾರವನ್ನು ಆಗ್ರಹಿಸುತ್ತಿವೆ. ಸಂಕಷ್ಟದ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ. ರೈತರ ಹಿತ ಕಾಯುವುದು ನಮ್ಮ ಮೊದಲ ಆದ್ಯತೆ. ಆದರೆ ಈ ವರ್ಷ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಜಲಾಶಯಗಳಲ್ಲಿ ನೀರಿನ ಕೊರತೆಯಾಗಿದೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದAತೆ ಎಚ್ಚರಿಕೆ ವಹಿಸುವುದು ಕೂಡ ನಮ್ಮ ಜವಾಬ್ದಾರಿಯಾಗಿದೆ ಎಂದು ಮಾಜಿಸಚಿವ ಚಲುವರಾಯಸ್ವಾಮಿ ಹೇಳಿದರು.

ಈಗಾಗಲೇ ಜಿಲ್ಲೆಯ ಎಲ್ಲಾ ಶಾಸಕರು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದೇವೆ. ಮುಖ್ಯಮಂತ್ರಿಗಳು ಈ ವಿಷಯವನ್ನು ಸಕಾರಾತ್ಮಕವಾಗಿ ಸ್ಪಂದಿಸಿ, ನಾಳಿನ ಅWಒಂ ಸಭೆಯನ್ನು ನೋಡಿಕೊಂಡು ನೀರು ಬಿಡೋಣ ಎಂದು ಭರವಸೆ ನೀಡಿದ್ದಾರೆ. ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಲಿದೆ. ಈ ಮಹತ್ವದ ಸಭೆಯಲ್ಲಿ ನಮ್ಮ ರಾಜ್ಯದ ಅಧಿಕಾರಿಗಳು ರಾಜ್ಯದ ವಸ್ತುಸ್ಥಿತಿಯನ್ನು, ಕುಡಿಯುವ ನೀರು ಹಾಗೂ ಬೆಳೆಗಳ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಲಿದ್ದಾರೆ.

ಈ ಸಭೆಯ ತೀರ್ಮಾನ ಏನಾಗುತ್ತದೆ ಎಂಬುದನ್ನು ನೋಡಿಕೊಂಡು, ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರ ಜೊತೆ ಚರ್ಚಿಸಿ ನೀರು ಬಿಡುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಮಳೆ ಬರುವ ಸಂಭವ ಕೂಡ ಇದೆ. ಕೆಆರ್‌ಎಸ್ ಜಲಾಶಯ ತುಂಬುವ ಆಶಯ ಕೂಡ ನಮಗಿದೆ. ರೈತರು ಬಿತ್ತನೆಗೆ ಇನ್ನೂ ಅವಕಾಶ ಇದೆ, ಆದ್ದರಿಂದ ಜಿಲ್ಲೆಯ ರೈತ ಬಾಂಧವರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು.

ಇದು ರೈತರ ಬದುಕು-ಸಾವಿನ ಪ್ರಶ್ನೆ. ಈ ಸೂಕ್ಷ÷್ಮ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ ಎಂದು ಎಲ್ಲಾ ಪಕ್ಷದ ನಾಯಕರಲ್ಲಿ ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ. ಜಿಲ್ಲೆಯ ರೈತ ಬಾಂಧವರು ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಂಡು ಸರ್ಕಾರದ ಜೊತೆ ಸಹಕರಿಸಬೇಕು. ಸರ್ಕಾರ ನಿಮ್ಮ ಜೊತೆಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Recent Articles

spot_img

Related Stories

Share via
Copy link