ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ : ಸರ್ಕಾರಿ ನೌಕರರ ಒಂದು ದಿನದ ವೇತನ ಕಟ್‌

ಮಂಡ್ಯ :

    ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ  ಹಾಗೂ ಮಂಡ್ಯ ಜಿಲ್ಲೆಯಲ್ಲಿ  ಸರ್ಕಾರಿ ನೌಕರರ  ಸಮುದಾಯ ಭವನವನ್ನು ನಿರ್ಮಿಸುವ ಉದ್ದೇಶಕ್ಕಾಗಿ ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಸ್ತ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳ ವೇತನದಲ್ಲಿ ಕಡಿತ ಮಾಡಲು ಸರ್ಕಾರ ಆದೇಶ ನೀಡಿದೆ.

    ಕಟಾಯಿಸಲಾದ ಒಟ್ಟಾರೆ ಕ್ರೋಢೀಕೃತ ಮೊತ್ತವನ್ನು ಮಂಡ್ಯ ಜಿಲ್ಲಾಧಿಕಾರಿ ಖಾತೆಗೆ ಸಂದಾಯ ಮಾಡಲು ಸರ್ಕಾರ ಮಂಜೂರಾತಿ ನೀಡಿದೆ. ಅದರೊಂದಿಗೆ ಈ ಕೆಳಗಿನ ಷರತ್ತುಗಳನ್ನು ಅನ್ವಯಿಸಲಾಗುತ್ತದೆ.

1) ನೌಕರರ ಒಂದು ದಿನದ ವೇತನ ವಂತಿಗೆಯನ್ನು 2024ರ ನವೆಂಬರ್ ತಿಂಗಳ ವೇತನದ ಬಿಲ್ಲಿನಿಂದ ಕಟಾವುಗೊಳಿಸುವ ಮೂಲಕ ವಸೂಲಿ ಮಾಡಲು ಆಯಾ ಕಛೇರಿ ಮುಖ್ಯಾಧಿಕಾರಿಗಳು (DDO) ಮತ್ತು ಖಜಾನಾಧಿಕಾರಿಗಳು ಅಧಿಕಾರ ಪಡೆದಿರುತ್ತಾರೆ.

2) ನವೆಂಬರ್ 2024ರ ತಿಂಗಳ ವೇತನದಲ್ಲಿ ಒಂದು ದಿನದ ವೇತನವನ್ನು ವಂತಿಗೆಯಾಗಿ ಕೊಡಲಿಚ್ಚಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಟವಾಡೆ ಅಧಿಕಾರಿಗಳಿಗೆ 2ನೇ ಡಿಸೆಂಬರ್ 2024ರೊಳಗೆ ಲಿಖಿತ ಮೂಲಕ ಸಲ್ಲಿಸತಕ್ಕದ್ದು ಮತ್ತು ಅಂತಹ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳಿನ ವೇತನ ಬಿಲ್ಲಿನಲ್ಲಿ ಕಟಾವು ಮಾಡತಕ್ಕದ್ದಲ್ಲ.

3) ವಂತಿಗೆ ರೂಪದಲ್ಲಿ ಕಟಾಯಿಸಲಾದ ಒಂದು ದಿನದ ವೇತನದ ಮೊತ್ತದ ಬಗ್ಗೆ ಸಂಬಂಧಿಸಿದ ನೌಕರರ ವೇತನ ಬಿಲ್ಲಿನಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ” ಎಂದು ಪ್ರತ್ಯೇಕ ಅಂಕಣದಲ್ಲಿ ನಮೂದಿಸತಕ್ಕದ್ದು ಮತ್ತು ಸಮಗ್ರ ವೇತನ ಬಿಲ್ಲಿನಲ್ಲಿ ಕಡಿತಗೊಳಿಸಿದ ಒಟ್ಟು ಮೊತ್ತವನ್ನು ವೇತನ ಬಿಲ್ಲಿನ ಮುಖ ಪುಟದಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ’ ಎಂಬುದಾಗಿ ಸ್ಪಷ್ಟವಾಗಿ ನಮೂದಿಸಬೇಕು.

4) ಜಿಲ್ಲಾ ಖಜಾನೆ ಅಧಿಕಾರಿಗಳು “ಖಜಾನೆ-2 ತಂತ್ರಾಂಶ’ ಅನುಷ್ಠಾನದ ಹಿನ್ನೆಲೆಯಲ್ಲಿ ವಂತಿಗೆ ರೂಪದಲ್ಲಿ ಕಟಾವು ಮಾಡಿದ ಹಣವನ್ನು ಸಂಬಂಧಿಸಿದ ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಇ-ಪಾವತಿ ಮೂಲಕ ನೇರವಾಗಿ ಜಮೆ ಮಾಡಲು ಈ ಕೆಳಕಂಡಂತೆ ಕ್ರಮವಹಿಸುವುದು. 

   2024ರ ನವೆಂಬರ್ ತಿಂಗಳಿನಲ್ಲಿ ಸ್ವೀಕರಿಸಲಾದ ವೇತನ ಬಿಲ್ಲುಗಳ ನಿರ್ವಹಣೆಯನ್ನು 2024ರ ಡಿಸೆಂಬರ್ 28ನೇ ದಿನಾಂಕದೊಳಗೆ ಪೂರೈಸಬೇಕು.ಮಹಾಲೇಖಪಾಲರು ನೀಡಿದ ಅಧಿಕಾರ ಪತ್ರದ ಮೇಲೆ ತಮ್ಮ ವೇತನವನ್ನು ಖಜಾನೆಯಿಂದ ಪಡೆಯುವ ಅಧಿಕಾರಿಗಳ ಪ್ರಕರಣದಲ್ಲಿಯೂ ಸಹ ಮೇಲೆ ಕಾಣಿಸಿದ ಕ್ರಮವನ್ನು ಪಾಲಿಸುವುದು ಎಂದು ಸೂಚನೆ ನೀಡಿದೆ.

Recent Articles

spot_img

Related Stories

Share via
Copy link