ನವದೆಹಲಿ:
ಆರ್‌ಎಲ್‌ಡಿ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಪ್ರಶಾಂತ್ ಕನೋಜಿಯಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮೇನಕಾ ಗಾಂಧಿ ಹೇಳಿರುವ ಒಂದು ನಿಮಿಷದ ವೀಡಿಯೋ ಹಂಚಿಕೊಂಡಿದ್ದಾರೆ
ಮೇನಕಾ ಗಾಂಧಿ ಅವರು ಇಸ್ಕಾನ್ ಮೇಲೆ ಗಂಭೀರ ಆರೋಪ ಮಾಡಿರುವ ಹೇಳಿಕೆಯ ವೀಡಿಯೋ ವೈರಲ್ ಆಗಿದೆ. ಇದರಲ್ಲಿ ಮೇನಕಾ ಗಾಂಧಿ, “ಒಂದು ನಿಮಿಷ. ನಾನು ನಿಮಗೆ ಹೇಳಿಬಿಡುತ್ತೇನೆ. ಈ ದೇಶದಲ್ಲಿ ಅತೀ ದೊಡ್ಡ ಮೋಸಗಾರರು ಯಾರಾದರೂ ಇದ್ದರೆ ಅದು ಇಸ್ಕಾನ್. ಇವರು ಗೋ ಶಾಲೆಗಳನ್ನು ನಡೆಸಲು ಸರ್ಕಾರದಿಂದ ಬೇಕಾದ ಸೌಲಭ್ಯ, ದೊಡ್ಡ ದೊಡ್ಡ ಜಮೀನುಗಳು, ಗೋಮಾಳಗಳು ಎಲ್ಲ ವ್ಯವಸ್ಥೆ ಸಿಗುತ್ತವೆ.
ಆದರೆ, ಇಸ್ಕಾನ್ ಅವರು ಕಟುಕರಿಗೆ ಮಾರಿದಷ್ಟು ಗೋವುಗಳನ್ನು ಖಂಡಿತವಾಗಿಯೂ ಬೇರೆ ಯಾರೂ ಕೂಡ ಮಾರಿರಲು ಸಾಧ್ಯವೇ ಇಲ್ಲವೇನೋ?!ಇವರೇ ಹೀಗೆ ಮಾಡಿರುವಾಗ ಬೇರೆಯವರ ಕಥೆಯೇನು? ಎಂದು ಬಿಜೆಪಿ ಸಂಸದೆ ಮೇನಕಾ ಹೇಳಿರುವ ವೀಡಿಯೋ ವೈರಲ್ ಆಗಿದೆ. ಮೇನಕಾ ಗಾಂಧಿ ಎಲ್ಲಿ ಯಾವಾಗ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂಬುದು ತಿಳಿದಿಲ್ಲ.