ಬೆಂಗಳೂರು :
ಆಪರೇಷನ್ ಅಲಮೇಲಮ್ಮ’, ‘ಕವಲುದಾರಿ’ ಮುಂತಾದ ಸಿನಿಮಾಗಳ ಮೂಲಕ ಹೆಸರು ಮಾಡಿದ ನಟ ರಿಷಿ ಅವರು ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸದ್ಯ ಅವರು ಒಂದಷ್ಟು ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ರಿಷಿ ಅವರಿಗೆ ಬೇಡಿಕೆ ಇದೆ. ಈ ನಡುವೆ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಮಂಗಳಾಪುರಂ’ ಎಂಬುದು ಈ ಸಿನಿಮಾದ ಶೀರ್ಷಿಕೆ. ಈಗ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಟೈಟಲ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ‘ಮಂಗಳಾಪುರಂ’ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಅಂದಹಾಗೆ, ಈ ಸಿನಿಮಾದಲ್ಲಿ ರಿಷಿ ಜೊತೆಗೆ ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಕೂಡ ನಟಿಸುತ್ತಾರೆ ಎಂಬುದು ವಿಶೇಷ. ಇದೇ ಮೊದಲ ಬಾರಿಗೆ ಈ ನಟರಿಬ್ಬರು ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ. ಆ ಕಾರಣದಿಂದಲೂ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ.
