ಮಂಗಳೂರು :
ರಾಜ್ಯದಲ್ಲಿ ಮತ್ತೊಂದು ರೇಣುಕಾಸ್ವಾಮಿ ಮಾದರಿಯ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಲಾಗಿದೆ.ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಯುವತಿಗೆ ಯುವಕನೊಬ್ಬ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಯುವತಿಗೆ ಪರಿಚಯಗೊಂಡ ಶಾಕಿಬ್ ಎಂಬಾತ ಆಕೆಗೆ ವಾಟ್ಸಾಪ್ನಲ್ಲಿ ಪ್ರತಿದಿನ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸುತ್ತಿದ್ದ. ಅಲ್ಲದೇ ಯುವತಿಗೆ ಮರ್ಮಾಂಗದ ಫೋಟೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವಿಚಾರವನ್ನು ಯುವತಿ ಪೋಷಕರಿಗೆ ತಿಳಿಸಿದ್ದು, ಬಳಿಕ ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ. ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿರುವ ಯುವಕ ಈ ಕೃತ್ಯ ಎಸಗಿದ್ದು, ಈ ಯುವತಿ ಮಾತ್ರವಲ್ಲದೇ ಹಲವರಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, ಆತನನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.