ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ….!

ಮಂಗಳೂರು

     ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ   ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಸುಹಾಶ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು   ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

8 ಆರೋಪಿಗಳು ಬಲೆಗೆ

   ಸುಹಾಸ್ ಶೆಟ್ಟಿ ಕೊಲೆ ಕೇಸ್‌ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ. ಇನ್ನು ಬರ್ಬರ ಹತ್ಯೆ ನಡೆಸಿದ್ದ ದುಷ್ಕರ್ಮಿಗಳನ್ನು ಪತ್ತೆಹಚ್ಚಿದ್ದು, ಪ್ರಮುಖ ಆರೋಪಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಇವತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಆರೋಪಿಗಳ ವಿವರ ನೀಡುವ ಸಾಧ್ಯತೆಯಿದೆ.

ಇಂದು ಮಂಗಳೂರಿಗೆ ಗೃಹ ಸಚಿವ ಪರಮೇಶ್ವರ್ ಭೇಟಿ

   ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಿಂದಾಗಿ ಮಂಗಳೂರು ಬೂದಿಮುಚ್ಚಿದ ಕೆಂಡವಾಗಿದೆ. ಇದರ ನಡುವೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಕೂಡ ಭಾಗಿಯಾಗಲಿದ್ದಾರೆ.

ಹತ್ಯೆ ಹಿಂದೆ 20 ಜನರ ಕೈವಾಡ ಎಂದ ಆರ್​​. ಅಶೋಕ್

  ಸುಹಾಸ್ ಶೆಟ್ಟಿ ಕೊಲೆ ನಡೆದ ಸ್ಥಳಕ್ಕೆ ನಿನ್ನೆ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕರಾದ ಭರತ್ ಶೆಟ್ಟಿ, ಯಶ್ ಪಾಲ್ ಸುವರ್ಣ, ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಮಾತನಾಡಿದ ಆರ್.ಅಶೋಕ್, ಈ ಕೊಲೆ ಹಿಂದೆ 20 ಜನರ ಕೈವಾಡವಿದೆ. ಇದೇ ಮೊದಲ ಬಾರಿಗೆ ಲೇಡಿ ಡಾನ್‌ಗಳು ಭಾಗಿಯಾಗಿದ್ದಾರೆ ಅಂತಾ ಸ್ಫೋಟಕ ಆರೋಪ ಮಾಡಿದ್ದಾರೆ.   ಸುಹಾಸ್‌ಶೆಟ್ಟಿ ಕೊಲೆ ಮಾಡಿದ ಯಾರೊಬ್ಬರೂ ಮಾಸ್ಕ್ ಹಾಕಿಲ್ಲ. ಕಾಶ್ಮೀರದಲ್ಲಿ ಈ ರೀತಿ ಆಗ್ತಿತ್ತು, ಆದರೆ ಇದೀಗ ಮಂಗಳೂರಿನಲ್ಲಿ ಆಗಿದೆ ಅಂತಾ ಆರ್. ಅಶೋಕ್ ಕಿಡಿಕಾರಿದ್ದಾರೆ. ಅದೇನೆ ಇರಲಿ ಸುಹಾಸ್ ಶೆಟ್ಟಿ ಕೊಲೆ ಹಿಂದೆ ಯಾರಿದ್ದಾರೆ? ಇದೀಗ ಪೊಲೀಸರು ವಶಕ್ಕೆ ಪಡೆದಿರುವ 8 ಶಂಕಿತ ಆರೋಪಿಗಳು ವಿಚಾರಣೆಯಲ್ಲಿ ಯಾವ ವಿಚಾರ ಬಾಯ್ಬಿಡುತ್ತಾರೆ, 2022ರಲ್ಲಿ ನಡೆದಿದ್ದ ಫಾಜಿಲ್ ಕೊಲೆಗೆ ಪ್ರತೀಕಾರವಾಗಿ ಈ ಮರ್ಡರ್ ನಡೀತಾ? ಬೇರೆ ಕಾರಣ ಏನಾದ್ರೂ ಇದೆಯಾ, ಇದೆಲ್ಲವೂ ತನಿಖೆಯಿಂದಷ್ಟೇ ಬಯಲಾಗಬೇಕಿದೆ.

Recent Articles

spot_img

Related Stories

Share via
Copy link