ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕ್ಕಮಗಳೂರಲ್ಲಿ ಮಹಿಳೆ ಸಾವು

ಚಿಕ್ಕಮಗಳೂರು:

    ಮಲೆನಾಡಿನಲ್ಲಿ ಕ್ಯಾಸನೂರು ಕಾಡಿನ ಕಾಯಿಲೆ  ಅಥವಾ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದೆ. ಇಂದು ಮಂಗನಕಾಯಿಲೆಯಿಂದ ಮತ್ತೊಬ್ಬ ಮಹಿಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಎನ್‌ಆರ್‌ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮ ನಿವಾಸಿ ಕಮಲಾ (65) ಎಂಬವರೇ ಸಾವನ್ನಪ್ಪಿರುವ ಮಹಿಳೆ.

     ಮಂಗನಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕಮಲಾ ಸಾವನ್ನಪ್ಪಿದ್ದಾರೆ. ಮೃತ ಕಮಲಾ ಅವರು ಚಿಕ್ಕಮಗಳೂರಿನ ಎನ್‌ಆರ್ ಪುರದ ಮೇಲ್ಪಾಲ್ ಗ್ರಾಮದಲ್ಲಿನ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಕಮಲಾ ಅವರನ್ನು ಮಂಗನಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ ಅದು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 

Recent Articles

spot_img

Related Stories

Share via
Copy link