ಸತತ 2ನೇ ಬಾರಿ ಪ್ರಮಾಣವಚನ ಸ್ವೀಕಾರ ಮಾಡಿದ ಡಾ ಮಾಣಿಕ್ ಸಹಾ

ಅಗರ್ತಲಾ:

    ಅವಧಿಗೆ ತ್ರಿಪುರಾದ ಮುಖ್ಯಮಂತ್ರಿಯಾಗಿ ಡಾ ಮಾಣಿಕ್ ಸಹಾ ಇಂದು ಪ್ರಮಾಣವಚನ ಸ್ವೀಕರಿಸಿದರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಡಾ ಮಾಣಿಕ್ ಸಹಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮಂಗಳವಾರವೇ ರಾಜ್ಯಕ್ಕೆ ಆಗಮಿಸಿದ್ದಾರೆ. ಅಗರ್ತಲಾದ ವಿವೇಕಾನಂದ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. 

 
     ಅಂತೆಯೇ ಬಿಜೆಪಿ ತನ್ನ ಶ್ರೇಣಿಯೊಳಗೆ ಮೂರು ಹೊಸ ಮಂತ್ರಿಗಳನ್ನು ಸೇರ್ಪಡೆಗೊಳಿಸಿದ್ದು, ಬಿಪ್ಲಬ್ ದೇಬ್ ಅವರ ನಿಕಟವರ್ತಿ ಟಿಂಕು ರಾಯ್, ಬಿಜೆಪಿಯ ಪರಿಶಿಷ್ಟ ಪಂಗಡಗಳ ಮೋರ್ಚಾದ ಮುಖ್ಯಸ್ಥ ಬಿಕಾಶ್ ದೆಬ್ಬರ್ಮಾ ಮತ್ತು ಸುಧಾಂಶು ದಾಸ್ ಕೂಡ ಪ್ರಮಾಣ ವಚನ ಸ್ವೀಕಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ