ಮಣಿಪುರ
ಮೊರೆಹ್ ಪಟ್ಟಣದಲ್ಲಿ ಭಾನುವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಬೆಟ್ಟದಲ್ಲಿ ಅಡಗಿಕೊಂಡಿದ್ದ ಉಗ್ರರು ರಾಜ್ಯ ಪೊಲೀಸ್ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರತಿಯಾಗಿ ಪೊಲೀಸರೂ ಗುಂಡು ಹಾರಿಸಿದ್ದಾರೆ.
ಇದಕ್ಕೂ ಮೊದಲು ಜನವರಿ 2ರಂದು ಗಡಿ ಪಟ್ಟಣವಾದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಇದರಲ್ಲಿ ಬಿಎಸ್ಎಫ್ ಜವಾನ್ ಸೇರಿದಂತೆ ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಉತ್ತಮ ಚಿಕಿತ್ಸೆಗಾಗಿ ಅವರನ್ನು ವಿಮಾನದಲ್ಲಿ ಇಂಫಾಲ್‌ಗೆ ಕರೆದೊಯ್ಯಲಾಯಿತು.
ಡಿಸೆಂಬರ್ 30ರಿಂದ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಮೊರೆಯಲ್ಲಿನ ದಾಳಿಯಲ್ಲಿ ಮ್ಯಾನ್ಮಾರ್‌ನ ವಿದೇಶಿ ಉಗ್ರರು ಭಾಗಿಯಾಗಿರುವ ಬಲವಾದ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕಳೆದ ವಾರ ಪ್ರತಿಕ್ರಿಯಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ