ಮಣಿಪುರ : ಶಸ್ತ್ರಾಸ್ತ್ರ ತೆಗೆದುಕೊಳ್ಳದಂತೆ ಸೇನೆಯನ್ನು ತಡೆದ ಮಹಿಳೆಯರು

ಬಿಷ್ಣುಪುರ್: 

    ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಮಂಗಳವಾರ ಮಹಿಳೆಯರ ನೇತೃತ್ವದ ಪ್ರತಿಭಟನಾಕಾರರು ಜಪ್ತಿ ಮಾಡಿದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ತೆಗೆದುಕೊಂಡು ಹೋಗದಂತೆ ಸೇನೆಯನ್ನು ತಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇಂದು ಬೆಳಗ್ಗೆ ಕುಂಬಿ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಸೇನೆಯ ಮಹಾರ್ ರೆಜಿಮೆಂಟ್‌ನ ಸಿಬ್ಬಂದಿ, ಎರಡು ಎಸ್‌ಯುವಿಗಳನ್ನು ತಡೆದ, ಅದರಲ್ಲಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದರು ಎಂದು ಅವರು ಹೇಳಿದ್ದಾರೆ.

   “ಸೇನಾ ಸಿಬ್ಬಂದಿಯನ್ನು ನೋಡಿದ ತಕ್ಷಣ ಎರಡು ವಾಹನಗಳಲ್ಲಿದ್ದ ದುಷ್ಕರ್ಮಿಗಳು, ವಾಹನ ಮತ್ತು ಶಸ್ತ್ರಾಸ್ತ್ರಗಳನ್ನು ಬಿಟ್ಟು ಓಡಿಹೋದರು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ವಲ್ಪ ಸಮಯದ ನಂತರ, ‘ಮೀರಾ ಪೈಬಿಸ್’ – ಮೈಟಿ ಮಹಿಳೆಯರ ನಾಗರಿಕ ಗುಂಪು ಸ್ಥಳದಲ್ಲಿ ಜಮಾಯಿಸಿ, ಶಸ್ತ್ರಾಸ್ತ್ರಗಳನ್ನು ತಮಗೆ ಹಸ್ತಾಂತರಿಸುವಂತೆ ಸೇನೆಗೆ ಒತ್ತಾಯಿಸಿದರು ಎಂದು ಅವರು ತಿಳಿಸಿದರು.

   ಕಳೆದ ವರ್ಷ ಮೇ ತಿಂಗಳಲ್ಲಿ ಆರಂಭವಾದ ಸಂಘರ್ಷ ಸಂಪೂರ್ಣ ಮುಗಿಯುವವರೆಗೆ ಯಾವುದೇ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಬಾರದು ಎಂದು ಮಹಿಳೆಯರು ಆಗ್ರಹಿಸಿದ್ದಾರೆ.

   ನೂರಾರು ಮಹಿಳೆಯರು ರಸ್ತೆ ತಡೆ ನಡೆಸಿ, ಸೇನಾ ಬೆಂಗಾವಲು ಪಡೆ ಸ್ಥಳದಿಂದ ಹೊರಹೋಗದಂತೆ ತಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

   ಗುಂಪನ್ನು ಚದುರಿಸಲು, ಸೇನೆಯು ಗಾಳಿಯಲ್ಲಿ ಗುಂಡು ಹಾರಿಸಿತು. ಆದರೂ ಮಹಿಳೆಯರು ಸ್ಥಳದಿಂದ ತೆರಳಲಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap