ಬಾಲಿವುಡ್​ ಹಿರಿಯ ನಟ, ನಿರ್ದೇಶಕ ಮನೋಜ್ ಕುಮಾರ್ ನಿಧನ

ಮುಂಬೈ :

   ಬಾಲಿವುಡ್​ಗೆ ಒಂದು ಕಹಿ ಸುದ್ದಿ ಸಿಕ್ಕಿದೆ. ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್  ಅವರು ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಾ ಇದ್ದರು. ಅವರು ರಾಷ್ಟ್ರ ಪ್ರೇಮದ ಸಿನಿಮಾಗಳನ್ನು ಮಾಡಿ ಹೆಸರು ವಾಸಿ ಆಗಿದ್ದರು. ಈ ಕಾರಣಕ್ಕೆ ಅವರಿಗೆ ‘ಭಾತರತ್ ಕುಮಾರ್’ ಎಂಬ ಹೆಸರನ್ನೂ ಇಡಲಾಗಿತ್ತು. ಅವರ ಸಾವಿಗೆ ಬಾಲಿವುಡ್​ ಮಂದಿ ಸಂತಾಪ ಸೂಚಿಸುತ್ತಿದ್ದಾರೆ.

 
    ಚಿತ್ರರಂಗಕ್ಕೆ ಮನೋಜ್ ಕುಮಾರ್ ಅವರ ಕೊಡುಗೆ ಅಪರಾವಾದದ್ದು. ಅವರ ನಿರ್ದೇಶನದಲ್ಲಿ ಮೂಡಿ ಬಂದ ‘ಉಪ್ಕಾರ್’ (1967) ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಸರ್ಕಾರದ ಕಡೆಯಿಂದ ಅವರಿಗೆ ಪದ್ಮಶ್ರೀ (1992) ಹಾಗೂ ದಾದಾ ಸಾಹೇಬ್ ಫಾಲ್ಕೆ ಅವಾರ್ಡ್​ (2015) ನೀಡಿ ಗೌರವಿಸಲಾಗಿದೆ.ಮನೋಜ್ ಕುಮಾರ್ ಅವರು ಪಂಜಾಬಿ ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. 1937ರಲ್ಲಿ ಇವರ ಜನನ ಆಯಿತು. ಅವರ ಮೂಲ ಹೆಸರು ಹರಿಕೃಷ್ಣ ಗಿರಿ ಗೋಸ್ವಾಮಿ ಎಂದು. ಅವರು 10ನೇ ವಯಸ್ಸಿಗೆ ಬಂದಾಗ ಇಡೀ ಕುಟುಂಬ ದೆಹಲಿಗೆ ಸ್ಥಳಾಂತರ ಆಯಿತು. 1957ರ ಸಮಯದಲ್ಲಿ ನಟನಾಗಿ ಮನೋಜ್ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿದರು.
 
    1967ರಲ್ಲಿ ‘ಉಪ್ಕಾರ್’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದರು. ಮೊದಲ ಚಿತ್ರದಲ್ಲೇ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ‘ಕ್ರಾಂತಿ’, ‘ಶೋರ್’, ‘ಕ್ಲರ್ಕ್’, ‘ಜೈ ಹಿಂದ್’ ರೀತಿಯ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದರು. ಈ ಸಿನಿಮಾ 199ರಲ್ಲಿ ರಿಲೀಸ್ ಆಯಿತು. ಆ ಬಳಿಕ ಅವರು ಚಿತ್ರರಂಗ ತೊರೆದರು. ಇನ್ನು ಕೆಲವು ಸಿನಿಮಾಗಳಿಗೆ ಸಂಕಲನಾಕರರಾಗಿ, ಕೆಲವು ಹಾಡುಗಳಿಗೆ ಸಾಹಿತ್ಯವನ್ನು ಅವರು ಬರೆದಿದ್ದಾರೆ ಅನ್ನೋದು ವಿಶೇಷ.

Recent Articles

spot_img

Related Stories

Share via
Copy link