ಟೊರೆಂಟೋ:
ಕೆನಡಾದ ಟೊರೊಂಟೊದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದರೆ, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ನಾರ್ತ್ ಯಾರ್ಕ್‌ನ ಲಾರೆನ್ಸ್ ಹೈಟ್ಸ್ ನೆರೆಹೊರೆಯಲ್ಲಿ ಗುಂಡಿನ ದಾಳಿ ನಡೆದಿದೆ. ಗಾಯಗೊಂಡವರವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟೊರೊಂಟೊ ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಸಂಜೆ ಲಾರೆನ್ಸ್ ಹೈಟ್ಸ್ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯ ಸುದ್ದಿಯಿಂದ ವಿಚಲಿತನಾಗಿದ್ದೇನೆ. ನನ್ನ ಕಚೇರಿಯು ಟೊರೊಂಟೊ ಪೊಲೀಸರೊಂದಿಗೆ ಸಂಪರ್ಕದಲ್ಲಿದೆ, ಅವರು ಈಗ ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿದ್ದಾರೆ ಮತ್ತು ಸ್ಥಳೀಯ ಕೌನ್ಸಿಲರ್ ಡೆಪ್ಯೂಟಿ ಮೇಯರ್ ಮೈಕ್ ಕೋಲ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಟೊರೊಂಟೊ ಮೇಯರ್ ಒಲಿವಿಯಾ ಚೌ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಜರ್ಮನಿಯ ಸಾರ್ವಜನಿಕ ಪ್ರದೇಶದಲ್ಲಿ ಮಹಿಳೆಯೊಬ್ಬಳು ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿದಿದ್ದಳು. ಜರ್ಮನಿಯ ಉತ್ತರ ನಗರದ ಹ್ಯಾಂಬರ್ಗ್‌ನ ಮುಖ್ಯ (knife attack) ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ಚಾಕು ದಾಳಿಯಲ್ಲಿ ಕನಿಷ್ಠ 18 ಜನರು ಗಾಯಗೊಂಡಿದ್ದಾರೆ ಎಂದು ಜರ್ಮನಿಯ ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಮಹಿಳೆಯನ್ನು ಬಂಧಿಸಿರುವುದಾಗಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗಾಯಾಳುಗಳ ಪೈಕಿ 6 ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ವಲ್ಪ ಸಮಯದ ನಂತರ 39 ವರ್ಷದ ಮಹಿಳೆಯನ್ನು ಬಂಧಿಸಲಾಗಿದ್ದು, ಆಕೆ ಒಬ್ಬಳೇ ಈ ಕೃತ್ಯವನ್ನು ಮಾಡಿದ್ದಾಳೆ ಎಂದು ಹೇಳಲಾಗಿತ್ತು.
ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೇರಿದಂತೆ ಉನ್ನತ ಮಟ್ಟದ ಅಂತರರಾಷ್ಟ್ರೀಯ ವ್ಯಕ್ತಿಗಳು ಮ್ಯೂನಿಚ್ ಭದ್ರತಾ ಸಮ್ಮೇಳನಕ್ಕಾಗಿ ನಗರಕ್ಕೆ ಆಗಮಿಸುವ ಕೆಲವೇ ಗಂಟೆಗಳ ಮೊದಲು ಈ ಘಟನೆ ನಡೆದಿತ್ತು. ದಾಳಿಯ ನಂತರ, ಶುಕ್ರವಾರ ಸಂಜೆ ನಿಲ್ದಾಣದ ನಾಲ್ಕು ಹಳಿಗಳನ್ನು ಮುಚ್ಚಲಾಯಿತು, ಇದರಿಂದಾಗಿ ಹಲವಾರು ದೂರದ ರೈಲುಗಳ ಸಂಚಾರ ವಿಳಂಬವಾಯಿತು ಮತ್ತು ಮಾರ್ಗ ಬದಲಾವಣೆ ಮಾಡಲಾಗಿತ್ತು.








