ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರತಿಕ್ರಿಯೆ

ಬೆಂಗಳೂರು:

 ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು:

ದೇವಸ್ಥಾನ, ಮಸೀದಿ, ಚರ್ಚು ಹೀಗೆ ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಯಾರಿಗೆ ತೊಂದರೆ ಆಗಿದೆ? ಚುನಾವಣಾ ವರ್ಷ ಎಂದು ಈ ರೀತಿ ಬೇಕಂತಲೇ ಕ್ಯಾತೆ ತೆಗೆಯುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇವೆಲ್ಲ ಸಮಾಜದ ಶಾಂತಿ, ಸಾಮರಸ್ಯ ಹಾಳುಮಾಡುವ ಪ್ರಯತ್ನಗಳು.

ಇಂಥಾ ಘಟನೆಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರು ಬರಲ್ಲ, ಉದ್ಯೋಗ ಸೃಷ್ಟಿಯಾಗಲ್ಲ, ನಿರುದ್ಯೋಗ ಸಮಸ್ಯೆ ಹೋಗಲ್ಲ, ರಾಜ್ಯದ ಜಿಡಿಪಿ ಬೆಳವಣಿಗೆಯಾಗಲ್ಲ.

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಏ.1ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ದರ ಹೆಚ್ಚಳ

ಈ ಎಲ್ಲಾ ಬೆಳವಣಿಗೆಗಳು ಸರ್ಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ. ಮುಖ್ಯಮಂತ್ರಿಗಳು ಮೌನವಾಗಿರುವುದಲ್ಲ, ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದ್ದಾರೆ. ಆರ್.ಎಸ್.ಎಸ್ ಮತ್ತು ಭಜರಂಗದಳ ಸರ್ಕಾರಕ್ಕೆ ಗೊತ್ತಿಲ್ಲದೆ ಇಷ್ಟೆಲ್ಲಾ ಮಾಡುತ್ತಾ? ಇದನ್ನು ಸರ್ಕಾರ ಹತ್ತಿಕ್ಕಬೇಕು, ಸಮಾಜದ ಶಾಂತಿ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.

ಸಮಾಜದ ಕೋಮು ಸಾಮರಸ್ಯ ಹಾಳುಮಾಡುವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಇದು ನಿಮಗೆ ಮುಂದೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಲು ಬಯಸುತ್ತೇನೆ.

1 ಕೆಜಿ ಅಕ್ಕಿ 500, ಅರ್ಧ ಲೀಟರ್ ಹಾಲು 790 ರೂ.!

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap