ಬೆಂಗಳೂರು:
ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮೋಸವಾಗಿದೆ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ವಿದೇಶಾಂಗ ಮತ್ತು ಸಾಂಸ್ಕೃತಿ ಖಾತೆ ರಾಜ್ಯ ಸಚಿವೆ ಹಾಗೂ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ ಶುಕ್ರವಾರ ಹೇಳಿದರು.
ನಗರದಲ್ಲಿ ಶುಕ್ರವಾರ ಮಹಿಳಾ ವಕೀಲರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಕೋಮುಗಲಭೆ, ಕ್ರಿಮಿನಲ್ ಮತ್ತು ಭ್ರಷ್ಟಾಚಾರ ಇವು ಕಾಂಗ್ರೆಸ್‌ನ ಮೂರು ಮಾನಸಿಕತೆ. ಇದರ ವಿರುದ್ಧ ಬಿಜೆಪಿ ಹೋರಾಡುತ್ತಿದೆ. ಕೇಂದ್ರ ಸರಕಾರದಿಂದ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಮೋಸವಾಗಿದೆ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಸಂವಿಧಾನದ 280ನೇ ವಿಧಿಯ ಪ್ರಕಾರವೇ ಅನುದಾನ ಹಂಚಿಕೆಯಾಗುತ್ತದೆ. ಅದರಂತೆ ರಾಜ್ಯಕ್ಕೆ 6,500 ಕೋ.ರೂ. ನೀಡಲಾಗಿದೆ. ಕಾಂಗ್ರೆಸ್ ತನ್ನ ಸುಳ್ಳಿಗೆ ವಿವರಣೆ ನೀಡಲಿ ಎಂದು ಅಗ್ರಹಿಸಿದರು.
ಬಿಜೆಪಿ ಆಡಳಿತದಲ್ಲಿ ಕರ್ನಾಟಕಕ್ಕೆ ಕೇಂದ್ರದ ಯೋಜನೆಗಳ ಅಡಿಯಲ್ಲಿ ಹೆಚ್ಚಿನ ಅನುದಾನ ಸಿಕ್ಕಿದೆ. ಪರಿಪೂರ್ಣ ರಾಜ್ಯವಾಗಿಸುವ ಗುರಿಯಿಂದ ಹೆಚ್ಚಿನ ಅನುದಾನ ನೀಡಲಾಗಿದೆ. ಹೆಚ್ಎಎಲ್ ಮತ್ತು ಇಸ್ರೋವನ್ನು ಬೆಂಗಳೂರಿಗೆ ನೀಡಲಾಗಿದೆ. ಅದಾಗ್ಯೂ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಚಾರ ನಡೆಸುತ್ತಿದೆ. ಕಾಂಗ್ರೆಸ್ ಹೇಳುತ್ತಿರುವುದು ಹಸಿ ಸುಳ್ಳು, ಯಾವುದೇ ಅನುದಾನ ಸಂವಿಧಾನದ 280ನೇ ವಿಧಿಯ ಪ್ರಕಾರವೇ ಅನುದಾನ ಹಂಚಿಕೆಯಾಗುತ್ತದೆ ಎಂದು ತಿಳಿಸಿದರು.
ನಾವು ಕೇಂದ್ರದ ಬಜೆಟ್ ಅನ್ನು ಸುಮಾರು 20 ಲಕ್ಷ ಕೋಟಿಗೆ ಹೆಚ್ಚಿಸುವಲ್ಲಿ ನಾವು ಯಶಸ್ವಿಯಾಗಿದ್ದು, ದೇಶದ ಜನರು ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ, 2014 ರವರೆಗೆ, 120 ಕೋಟಿ ಜನಸಂಖ್ಯೆಯೊಂದಿಗೆ ದೇಶದಲ್ಲಿ ವ್ಯವಹಾರ ಖಾತೆಗಳು ಸೇರಿದಂತೆ 11 ಕೋಟಿ ಬ್ಯಾಂಕ್ ಖಾತೆಗಳಿದ್ದವು. ತೆರಿಗೆ ವ್ಯವಸ್ಥೆಯನ್ನು ಸರಳೀಕರಿಸಲು ಜಿಎಸ್‌ಟಿಯನ್ನು ಪರಿಚಯಿಸುವ ಮೂಲಕ ಪ್ರಧಾನಿ ಮೋದಿ ಲೋಪದೋಷಗಳನ್ನು ಪರಿಹರಿಸಿದ್ದಾರೆಂದು ಹೇಳಿದರು