ಬೆಂಗಳೂರು :
ಮೆಗಾಸ್ಟಾರ್ ಚಿರಂಜೀವಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ವಿಷಯವನ್ನು ಸ್ವತಃ ಚಿರಂಜೀವಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಚಿರಂಜೀವಿ ಅವರಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಆದರೆ, ವೈದ್ಯಕೀಯ ಪರೀಕ್ಷೆ ಯಲ್ಲಿ ಸೋಂಕು ಇರುವುದು ಖಾತರಿಯಾಗಿದೆ.
ఆచార్య షూటింగ్ ప్రారంభించాలని,కోవిడ్ టెస్ట్ చేయించుకున్నాను. రిజల్ట్ పాజిటివ్. నాకు ఎలాంటి కోవిడ్ లక్షణాలు లేవు.వెంటనే హోమ్ క్వారంటైన్ అయ్యాను.గత 4-5 రోజులుగా నన్ను కలిసినవారందరిని టెస్ట్ చేయించుకోవాలిసిందిగా కోరుతున్నాను.ఎప్పటికప్పుడు నా ఆరోగ్య పరిస్థితిని మీకు తెలియచేస్తాను. pic.twitter.com/qtU9eCIEwp
— Chiranjeevi Konidela (@KChiruTweets) November 9, 2020
‘ಆಚಾರ್ಯ’ ಚಿತ್ರೀಕರಣಕ್ಕೆ ತೆರಳುವ ಮುನ್ನ ಚಿರಂಜೀವಿ ಅವರು ಕೋವಿಡ್-19 ಪರೀಕ್ಷೆ ಒಳಪಟ್ಟಿದ್ದರು. ನಂತರ ವೈದ್ಯಕೀಯ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಸದ್ಯ ತಾವು ಮನೆಯಲ್ಲೇ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದು, ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
