ಬೆಂಗಳೂರು:
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವಂತ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ನಿನ್ನೆಯ ಭಾನುವಾರದಿಂದಲೇ, ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಲಿಕಲ್ಲು ಸಹಿತ ಮಳೆಯಿಂದಾಗಿ ಜನರು ತತ್ತರಿಸಿ ಹೋಗುವಂತೆ ಆಯ್ತು.ಇನ್ನೂ ಇಂದಿನಿಂದ ಮೂರು ದಿನ ರಾಜ್ಯಾಧ್ಯಂತ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವಂತ ಹವಾಮಾನ ತಜ್ಞ ಡಾ.ಶ್ರೀನಿವಾಸ ರೆಡ್ಡಿಯವರು, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವಂತ ಸುಳಿಗಾಳಿಯ ಪರಿಣಾಮದಿಂದ ವಿದರ್ಭದಿಂದ ಕರ್ನಾಟಕದವರೆಗೆ ಮೋಡ ಕವಿದ ವಾತಾವಣವಿದೆ. ಜೊತೆಗೆ ತಾಪಮಾನ ಹೆಚ್ಚಳದ ಕಾರಣದಿಂದಾಗಿ ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ ಎಂದಿದ್ದಾರೆ.
ಮೊದಲೆರಡು ಸ್ಥಾನದಲ್ಲಿ ಎರಡು ಹೊಸ ತಂಡಗಳು: ಐಪಿಎಲ್ 2022 ಅಂಕಪಟ್ಟಿ ಇಲ್ಲಿದೆ ನೋಡಿ
ಇಂದಿನಿಂದ ಮುಂದಿನ 72 ಗಂಟೆಯವರೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾದರೇ, ಬೆಂಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ.
17ನೇ ದಿನವೂ ಮುಂದುವರಿದ ‘ಕೆಜಿಎಫ್ 2’ ಅಬ್ಬರ; ಯಶ್ ಎದುರು ಮಂಕಾದ ಅಜಯ್ ದೇವಗನ್, ಟೈಗರ್ ಸಿನಿಮಾ
ಇನ್ನೂ ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಉಷ್ಣಾಂಶ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ. ಮೇ.5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಬೀಳಲಿದೆ ಎಂಬುದಾಗಿಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
