ಮೆಟ್ರೋ ಖಜಾನೆಗೆ ಕಳೆ, ಬರೋಬ್ಬರಿ 2 ಕೋಟಿ ರೂ ಆದಾಯ

ಬೆಂಗಳೂರು 

   ಎಂಜಿ ರೋಡ್, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಹಿನ್ನೆಲೆ ನಮ್ಮ ಮೆಟ್ರೋ ರೈಲು ಸೇವೆಯನ್ನು ತಡರಾತ್ರಿ ಎರಡು ಗಂಟೆವರೆಗೂ ವಿಸ್ತರಿಸಲಾಗಿತ್ತು. ಪರಿಣಾಮ ನಿನ್ನೆ ಒಂದೇ ದಿನ ನಮ್ಮ ಮೆಟ್ರೋಗೆ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯವಾಗಿದೆ.

   ಹೊಸ ವರ್ಷ ಹಿನ್ನೆಲೆಯಲ್ಲಿ ನಿನ್ನೆ ಬೆಳಗ್ಗೆ 5ರಿಂದ ಮಧ್ಯರಾತ್ರಿ 2.45ರವರೆಗೆ ಮೆಟ್ರೋ ರೈಲುಗಳು ಸಂಚಾರ ಮಾಡಿವೆ. ನಿನ್ನೆ ಒಂದೇ ದಿನ ಪಿಂಕ್‌ ಲೈನ್​​ನಲ್ಲಿ ಒಟ್ಟು 4,00,583, ಗ್ರೀನ್ ಲೈನ್​ನಲ್ಲಿ  2,90,530, ಪಿಂಕ್‌ ಮತ್ತು ಗ್ರೀನ್ ಮಾರ್ಗದಿಂದ ಒಟ್ಟು 8,59,467, ಪೇಪರ್ ಟಿಕೆಟ್ ಮೂಲಕ ಮೆಟ್ರೋಟದಲ್ಲಿ 5,423 ಮತ್ತು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ 1,62,931 ಜನರು ಪ್ರಯಾಣ ಮಾಡಿದ್ದಾರೆ. ಆ ಮೂಲಕ ನಮ್ಮ ಮೆಟ್ರೋಗೆ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯ ಹರಿದುಬಂದಿದೆ. 

  ಎಂ.ಜಿ ರಸ್ತೆಯಲ್ಲಿ ಜನಸಂದಣಿ ಹಿನ್ನೆಲೆ ಡಿಸೆಂಬರ್ 31, 2024 ರಂದು ರಾತ್ರಿ 11:00 ಗಂಟೆಯಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್​ ಮಾಡಲಾಗಿತ್ತು. ಪ್ರಯಾಣಿಕರ ಬಳಕೆಗಾಗಿ ಹತ್ತಿರದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್‌ನಲ್ಲಿ ರೈಲುಗಳು ಸ್ಟಾಪ್​ ಮಾಡಲಾಗಿತ್ತು.
  ಇನ್ನು ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಂದ ಯಾವುದೇ ನಿಲ್ದಾಣಕ್ಕೆ ರಾತ್ರಿ 11:00 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು 50 ಬೆಲೆಯ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಅನ್ನು ನೀಡಲಾಗಿತ್ತು. ಈ ಕಾಗದದ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ 31ನೇ ಡಿಸೆಂಬರ್ 2024ರ ಬೆಳಗ್ಗೆ 8:00 ರಿಂದ ಮುಂಗಡವಾಗಿ ಖರೀದಿಸಬಹುದಾಗಿತ್ತು. ಸಾಮಾನ್ಯ QR ಕೋಡ್ ಟಿಕೆಟ್​ಗಳು ಮತ್ತು ಕಾರ್ಡ್‌ಗಳು ಈ ನಿಲ್ದಾಣಗಳಿಂದ ಪ್ರಯಾಣಿಸಲು ಸಹ ಮಾನ್ಯ ಮಾಡಲಾಗಿತ್ತು.

Recent Articles

spot_img

Related Stories

Share via
Copy link