ಮೆಟ್ರೋದಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋ ಮಾಡಿ ಇನ್​ಸ್ಟಾಗ್ರಾಂನಲ್ಲಿ ಅಪ್ಲೋಡ್: ವ್ಯಾಪಕ ಆಕ್ರೋಶ

ಬೆಂಗಳೂರು

      ನಮ್ಮ ಮೆಟ್ರೋ ಸಿಲಿಕಾನ್​ ಸಿಟಿ ಜನರ ಜೀವನಾಡಿ. ಈ ವೇಗದೂತ ಮೂಲಕ ಪ್ರತಿನಿತ್ಯ ಲಕ್ಷಾಂತರ ಜನರು ನಗರದ ಮೂಲೆ ಮೂಲೆಗೆ ಸಂಚಾರ ಮಾಡುತ್ತಾರೆ. ಆದರೆ ನಮ್ಮ ಮೆಟ್ರೋ ಹೆಣ್ಣು ಮಕ್ಕಳಿಗೆ ಎಷ್ಟು ಸುರಕ್ಷಿತ ಎಂಬ ಅನುಮಾನಗಳು ಆಗಾಗ ಮೂಡುತ್ತವೆ. ಏಕೆಂದರೆ ಮೆಟ್ರೋದಲ್ಲಿ ಹುಡುಗಿಯರ  ಆಕ್ಷೇಪಾರ್ಹ ವಿಡಿಯೋಗಳನ್ನು ಮಾಡಿ ಇನ್​ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡುವ ಮೂಲಕ ಅಪರಿಚಿತನೋರ್ವ ವಿಕೃತಿ ಮೆರೆದಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ  ವ್ಯಾಪಕ ಆಕ್ರೋಶ ಬೆನ್ನಲ್ಲೇ ಇದೀಗ ಎಲ್ಲಾ ವಿಡಿಯೋಗಳನ್ನು ಡಿಲೀಟ್​ ಮಾಡಲಾಗಿದೆ. ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (ಸುಮೊಟೋ ಕೇಸ್) ಪ್ರಕರಣ ದಾಖಲಾಗಿದೆ.

    “ಮೆಟ್ರೋ ಕ್ಲಿಕ್ಸ್” ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಮೆಟ್ರೋದಲ್ಲಿನ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಅಪ್ಲೋಡ್​ ಮಾಡಲಾಗಿದೆ. 5,538 ಹಿಬಾಲಕರನ್ನು ಹೊಂದಿರುವ ಖಾತೆಯಲ್ಲಿ ಸುಮಾರು 13ಕ್ಕೂ ಹೆಚ್ಚು ವಿಡಿಯೋಗಳನ್ನು ಅಪರಿಚಿತನೋರ್ವ ಹಂಚಿಕೊಂಡಿದ್ದಾನೆ. ಮೆಟ್ರೋ ರೈಲಿನ ಒಳಗೆ, ನಿಲ್ದಾಣಗಳಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್ ಮಾಡಲಾಗಿದೆ.

    ಸದ್ಯ ಅಪರಿಚಿತನ ವಿಕೃತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಲ್ಲಾ ವಿಡಿಯೋಗಳು ಡಿಲೀಟ್ ಆಗಿವೆ. ಐಟಿ ಆ್ಯಕ್ಟ್ 2008 ಸೆಕ್ಷನ್ 67, ಬಿಎನ್​ಎಸ್ 78(2)ರಡಿ ಬನಶಂಕರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

   ಇನ್ನು ಘಟನೆ ಬಗ್ಗೆ ಕೆಲ ಜನರು ಧ್ವನಿ ಎತ್ತಿದ್ದು, ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ‘ಅಪರಿಚಿತನೋರ್ವ ಇನ್​ಸ್ಟಾಗ್ರಾಂನಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮಾಡಿ ಅಪ್ಲೋಡ್ ಮಾಡುತ್ತಿದ್ದಾನೆ. ನಾಳೆ ಈ ವಿಡಿಯೋಗಳಲ್ಲಿ ನಮ್ಮ ಅಕ್ಕ, ತಂಗಿಯರು ಇರಬಹುದು ಹುಷಾರಾಗಿರಿ. ಮೊದಲು ಈ ಖಾತೆಯನ್ನು ರಿಪೋರ್ಟ್ ಮಾಡಿ. ಬೆಂಗಳೂರು ನಗರ ಪೊಲೀಸರಿಗೂ ಟ್ಯಾಗ ಮಾಡಿ. ಆದಷ್ಟು ಬೇಗ ಈ ಖಾತೆಯನ್ನು ತೆಗೆಸಲೇಬೇಕು’ ಎಂದು ಒಬ್ಬರು ಹೇಳಿದ್ದಾರೆ.

    ಈ ಬಗ್ಗೆ ಮತ್ತೊಬ್ಬರು ಮಾತನಾಡಿದ್ದು, ‘ಈ ರೀತಿಯ ಕೃತ್ಯಗಳನ್ನು ನಾವು ನಾಶ ಮಾಡದಿದ್ದರೆ ಮುಂದೊಂದು ದಿನ ಇದು ನಮ್ಮನ್ನು ನಾಶ ಮಾಡುತ್ತದೆ’ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಬಿಜೆಪಿ ಸಂಸದ ಪಿಸಿ ಮೋಹನ್ ಟ್ವೀಟ್ ಮಾಡಿದ್ದು, ಇದು ಆಘಾತಕಾರಿ ಸಂಗತಿಯಾಗಿದೆ. ಇದು ಭಯಾನಕ ಅಪರಾಧ ಮಾತ್ರವಲ್ಲ, ಗಂಭೀರ ಅಪರಾಧವೂ ಆಗಿದೆ. ತಕ್ಷಣ ಬೆಂಗಳೂರು ಪೊಲೀಸರು ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Recent Articles

spot_img

Related Stories

Share via
Copy link