ಬೆಂಗಳೂರು:
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಮುಂಬರುವ ಪ್ರಯಾಣ ದರ ಏರಿಕೆಯನ್ನು ಅತ್ಯಂತ ಗೌಪ್ಯವಾಗಿಟ್ಟಿದ್ದರೂ ಫೆಬ್ರುವರಿ 1 ರಿಂದ ದರ ಏರಿಕೆಯಾಗಲಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ಖಚಿತಪಡಿಸಿವೆ. ಪ್ರಯಾಣ ದರ ಶೇ. 41 ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈಗ ಮೆಟ್ರೋ ಟೋಕನ್ ದರ ರೂ. 10 ರಿಂದ 60 ರ ನಡುವೆ ಇದ್ದು, ಮೆಟ್ರೋ ಕಾರ್ಡ್‌ಗಳ ಮೇಲೆ ಶೇ. 5 ರಷ್ಟು ರಿಯಾಯಿತಿ ಇದೆ.
ದರ ಪರಿಷ್ಕರಣೆ ಸಮಿತಿ ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಯ್ಕೆ 2002ರ ಅಡಿಯಲ್ಲಿ ಶೇ. 41 ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ದರ ಪರಿಷ್ಕರಿಸಲು ರಚಿಸಲಾದ ಸಮಿತಿಯು ಶೇ. 41 ರಷ್ಟು ಹೆಚ್ಚಳವನ್ನು ಪ್ರಸ್ತಾಪಿಸಿದೆ.
ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002 ರ ಅಡಿಯಲ್ಲಿ ದರ ನಿಗದಿ ಸಮಿತಿ (FFC) ಹೊರಡಿಸಿದ ಆದೇಶಕ್ಕೆ BMRCL ತನ್ನ ಒಪ್ಪಿಗೆ ನೀಡಿದೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿರುವ ಸಮಿತಿ ಅಧ್ಯಕ್ಷ ಶ್ರೀನಿವಾಸ ಕಟಿಕಿತಾಳ ಅವರು ಒಪ್ಪಿಗೆ ಸೂಚಿಸಿದರೆ ಅದು ಕೇಂದ್ರದಿಂದ ಒಪ್ಪಿಗೆ ಪಡೆದಂತೆ. ಹೀಗಾಗಿ ದರ ಏರಿಕೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ.
ಜನ ದಟ್ಟಣೆ ಇಲ್ಲದ ಸಮಯದಲ್ಲಿ ಪ್ರಯಾಣದ ಸಮಯದಲ್ಲಿ ಶೇಕಡಾ 5 ರಷ್ಟು ರಿಯಾಯಿತಿಯನ್ನು ಹೊರತುಪಡಿಸಿ, ಮೆಟ್ರೋ ಸ್ಮಾರ್ಟ್ ಕಾರ್ಡ್‌ಗಳಂತೆಯೇ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್‌ನ ಬಳಕೆಗೆ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ. BMRCL ಸುದ್ದಿಗೋಷ್ಠಿಯನ್ನು ಮುಂದೂಡಿದ್ದು, ದರ ಹೆಚ್ಚಳ ಮುಂದಿನ ವಾರ ಜಾರಿಗೆ ಬರಲಿದೆ ಎಂದು ಮೆಟ್ರೋ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಮೆಟ್ರೋವನ್ನು ಅನುಕರಿಸುವುದು BMRCL ಪರಿಗಣಿಸಬಹುದಾದ ಒಂದು ಪರ್ಯಾಯ ಆಯ್ಕೆಯಾಗಿದೆ ಎಂದು ಮತ್ತೋರ್ವ ಅಧಿಕಾರಿ ಹೇಳಿದ್ದಾರೆ. 2017 ರಲ್ಲಿ ದೆಹಲಿಯಲ್ಲಿ ಕನಿಷ್ಠ ದರವನ್ನು ರೂ .2 ಮತ್ತು ಗರಿಷ್ಠ ದರವನ್ನು ರೂ. 30 ರಿಂದ 60 ಕ್ಕೆ ದ್ವಿಗುಣಗೊಳಿಸಲಾಗಿತ್ತು. ಎರಡು ಹಂತಗಳಲ್ಲಿ ದರ ಏರಿಕೆಯನ್ನು ಜಾರಿಗೆ ತಂದಿತು. ಹಂತ-1 ರಲ್ಲಿ ಮೇ 10 ರಿಂದ ಸೆಪ್ಟೆಂಬರ್ 30 ರವರೆಗೆ ಕನಿಷ್ಠ ದರವನ್ನು ಹೆಚ್ಚಿಸಿತು ಆದರೆ ಗರಿಷ್ಠ ದರವನ್ನು 50 ರೂ.ಗೆ ಹೆಚ್ಚಿಸಿತು. ಅಕ್ಟೋಬರ್ 1 ರ ನಂತರ ಅದನ್ನು 60 ರೂಗೆ ಹೆಚ್ಚಿಸಲಾಗಿತ್ತು. ಆದಾಗ್ಯೂ FFC ಶಿಫಾರಸು ಅನುಸರಿಸುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳ ಕುರಿತು ವಿವರ ಒದಗಿಸಲಾಗುವುದು ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಟಿಎನ್‌ಐಇಗೆ ತಿಳಿಸಿದ್ದಾರೆ.